ಕಾಸರಗೋಡು: ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಂಡಿರುವ ವಿವಿಧ ನವೀಕೃತ ಚಟುವಟಿಕೆಗಳ ಉದ್ಘಾಟನೆ ನಾಳೆ(ಅ.27ರಂದು) ನಡೆಯಲಿದೆ. ಸಂಜೆ 3.30ಕ್ಕೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವೀಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್ ಮುಖ್ಯ ಅತಿಥಿಯಾಗಿರುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎನ್.ಎ.ನೆಲ್ಲಿಕುನ್ನು, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ನಗರಸಭೆ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಮೊದಲಾದವರು ಉಪಸ್ಥಿತರಿರುವರು.