HEALTH TIPS

ದೀಪಾವಳಿ ಹಬ್ಬದ ವೇಳೆ ದೇಶದ ಸೈನಿಕರಿಗಾಗಿ ದೀಪ ಬೆಳಗಿಸಿ; ಮನ್​ ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ

       ನವದೆಹಲಿ: ಇಡೀ ಭಾರತ ಇಂದು ದಸರಾ ಹಬ್ಬದ ಸಂಭ್ರಮದಲ್ಲಿದೆ. ಹಬ್ಬದ ಪ್ರಯುಕ್ತ ದೇಶದ ಜನರಿಗೆ 70ನೇ ಮನ್  ಕಿ ಬಾತ್ ನಲ್ಲಿ ಶುಭಕೋರಿರುವ ಪ್ರಧಾನಿ ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದು, "ಧೈರ್ಯಶಾಲಿ ಸೈನಿಕರು ಮತ್ತು ಭದ್ರತಾ ಪಡೆಗಳೊಂದಿಗೆ ಭಾರತ ದೃಢವಾಗಿ ನಿಂತಿದೆ. ಕೊರೋನಾ ಸಾಂಕ್ರಾಮಿಕದ ನಡುವೆ ಹಬ್ಬಗಳನ್ನು ಆಚರಿಸುವಾಗ ಸೈನಿಕರಿಗಾಗಿ ದೀಪ ಬೆಳಗಿಸಬೇಕು" ಎಂದು ದೇಶದ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ. ಈ ತಿಂಗಳ ಮನ್ ಕಿ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, "ದಸರಾ ಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿ, ದೇಶಾದ್ಯಂತ ಕೊರೋನಾ ಉಲ್ಬಣಗೊಳ್ಳುತ್ತಿರುವ ಈ ಸಮಯದಲ್ಲಿ ಹಬ್ಬಗಳನ್ನು ಆಚರಿಸುವಾಗ ಜನರು ತಾಳ್ಮೆ, ಎಚ್ಚರಿಕೆ ವಹಿಸಬೇಕು" ಎಂದು ಹೇಳಿದ್ದಾರೆ.

        ದೇಶದ ಜನರನ್ನು, ದೇಶವನ್ನು ಹೊರಗಿನ ದಾಳಿಗಳಿಂದ ಸುರಕ್ಷಿತವಾಗಿರಿಸಲು ನಮ್ಮ ಸೈನಿಕರು ತಮ್ಮ ಕುಟುಂಬಗಳಿಂದ ದೂರ ಇದ್ದು ಸೇವೆ ಸಲ್ಲಿಸುತ್ತಿದ್ದಾರೆ. ಈ ಸಮಯದಲ್ಲಿ ಈದ್, ದೀಪಾವಳಿಯಂತಹ ಹಲವಾರು ಹಬ್ಬಗಳು ನಡೆಯಲಿವೆ. ಈ ಹಬ್ಬಗಳ ಸಮಯದಲ್ಲಿ, ಗಡಿಯಲ್ಲಿ ನಿಂತಿರುವ ನಮ್ಮ ಕೆಚ್ಚೆದೆಯ ಸೈನಿಕರನ್ನು ಸಹ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದಿದ್ದಾರೆ

        ಭಾರತ-ಚೀನಾ ಭಿನ್ನಾಭಿಪ್ರಾಯಕ್ಕೆ ಸಿಲುಕಿರುವ ಈ ಸಮಯದಲ್ಲಿ ಪ್ರಧಾನಿ ಮೋದಿಯವರ ಈ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಚೀನಾ ತನ್ನ ಸೈನ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಗಮನಾರ್ಹವಾಗಿ ಬಲಪಡಿಸಿದ್ದು, ಲಡಾಖ್‍ನಲ್ಲಿ ಉದ್ವಿಗ್ನತೆ ಕಡಿಮೆಗೊಳ್ಳುವ ಯಾವುದೇ ಲಕ್ಷಣ ಕಾಣಿಸಿಲ್ಲ. ಕೊರೋನಾ ವಿರುದ್ಧದ ಯುದ್ಧದಲ್ಲಿ ಗೆಲುವು ಖಚಿತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆಲ್ಲಾ ಸಂಯಮ ಮುಖ್ಯ ಎಂದಿದ್ದಾರೆ. ಹಬ್ಬದ ಸಂದರ್ಭದಲ್ಲಿ ದೇಶದ ಜನತೆ ಸ್ವದೇಶಿ ಹಾಗೂ ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಾಗಿ ಬಳಸಿ ಎಂದು ಪ್ರಧಾನಿ ಕರೆ ನೀಡಿದ್ದಾರೆ.

     "ಹಬ್ಬದ ಆಚರಣೆಯಲ್ಲಿ ಕೊರೋನಾ ನಿಯಮಾವಳಿಗಳನ್ನು ಮರೆಯಬೇಡಿ. ಮಾಸ್ಕ್, ಸಾಮಾಜಿಕ ಅಂತರ ಪಾಲಿಸಿ ಎಂದಿದ್ದಾರೆ. ಅಲ್ಲದೇ ಕೊರೊನಾ ಸಂದರ್ಭದಲ್ಲಿ ಖಾದಿ ಮಾಸ್ಕ್‍ಗಳು ಜನಪ್ರಿಯವಾಗಿವೆ. ಮೆಕ್ಸಿಕೊದ ಒಕ್ಸಾಕ ಪ್ರದೇಶದಲ್ಲಿಯೂ ಖಾದಿ ಮಾಸ್ಕ್ ತಯಾರಿಸಲಾಗುತ್ತಿದೆ. ಖಾದಿಯು ಪರಿಸರಸ್ನೇಹಿಯೂ ಶರೀರ ಸ್ನೇಹಿಯೂ ಆಗಿದೆ" ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries