HEALTH TIPS

ಕಾಸರಗೋಡು ಜಿಲ್ಲೆಯಲ್ಲಿ ನಿಷೇದಾಜ್ಞೆ ಆದೇಶ

   

       ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ  ಕೋವಿಡ್ ಸೋಂಕು ಅತ್ಯಧಿಕ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಆದೇಶ ಪ್ರಕಟಿಸಿದ್ದಾರೆ. 

       1973ರ ಕ್ರಿಮಿನಲ್ ಕಾಯಿದೆ 144 ಪ್ರಕಾರದ ನಿಷೇಧಾಜ್ಞೆ ಅ.2 ರಾತ್ರಿ 12 ಗಂಟೆಯಿಂದ ಅ.9ರಂದು ರಾತ್ರಿ 12 ಗಂಟೆ ವರೆಗೆ ಜಾರಿಯಲ್ಲಿರುವುದು ಎಂದವರು ತಿಳಿಸಿದರು.

     ಕಾಸರಗೋಡು ಜಿಲ್ಲೆಯ ಎಲ್ಲ ಜನತೆ ಸಾಮಾಜಿಕ ಅಂತರ ಕಾಯ್ದುಕೊಂಡು, ಸಾಬುನು/ ಸಾನಿಟೈಸರ್ ಬಳಸಿ ಕೈಗಳನ್ನು ಶುಚಿಗೊಳಿಸಿ, ಮಾಸ್ಕ್ ಸೂಕ್ತ ರೀತಿ ಬಳಸಿ, ಕೋವಿಡ್ ಪ್ರತಿರೋಧ ಸಂಹಿತೆಗಳನನು ಯಥಾವತ್ತಾಗಿ ಪಾಲಿಸಿ ಸಹಕರಿಸುವಂತೆ ಅವರು ಹೇಳಿದರು. 

      ವಿವಾಹ ಸಂಬಂಧ ಸಮಾರಮಭಗಳಲ್ಲಿ ಗರಿಷ್ಠ 50 ಮಂದಿ, ಮರಣ, ಉತ್ತರ ಕ್ರಿಯೆ ಸಹಿತ ಸಮಾರಂಭಗಳಲ್ಲಿ ಗರಿಷ್ಠ 20 ಮಂದಿ ಭಾಗವಹಿಸಬಹುದಾಗಿದೆ. ಅಧಿಕೃತ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಪ್ರಾರ್ಥನೆ, ರಾಜಕೀಯ ಪಕ್ಷಗಳ ಸಭೆಗಳು, ಸಾಂಸ್ಕøತಿಕ-ಸಾಮಾಜಿಕ ಸಾರ್ವಜನಿಕ ಸಮಾರಂಭಗಳು ಇತ್ಯಾದಿ ಕಡೆ 20 ಮಂದಿ ಭಾಗವಹಿಸಲು ಮಾತ್ರ ಅನುಮತಿ ನೀಡಲಾಗುವುದು. ಸಾರ್ವಜನಿಕ ಉತ್ಸವಗಳು, ಬಸ್ ನಿಲ್ದಾಣ, ಸಾರ್ವಜನಿಕ ಸಂಚಾರ ವ್ಯವಸ್ಥೆ, ಕಚೇರಿಗಳು, ನೌಕರಿ ಕೇಂದ್ರಗಳು, ಅಂಗಡಿಗಳು, ಇನ್ನಿತರ ವಾಣಿಜ್ಯ-ವ್ಯಾಪಾರ ಸಂಸ್ಥೇಗಳು, ಉದ್ದಿಮೆ ಕೇಂದ್ರಗಳು, ಆಸ್ಪತ್ರೆಗಳು, ಆರೋಗ್ಯ ಕ್ಲಬ್ ಗಳು , ಕ್ರೀಡಾ ತರಬೇತಿ ಕೇಂದ್ರಗಳು, ಪರೀಕ್ಷೆ, ರಿಕ್ರೂಟ್ ಮೆಂಟ್ ವ್ಯವಸ್ಥೇಗಳು ಇತ್ಯಾದಿ ಕಡ್ಡಾಯವಾಗಿ ಕೋವಿಡ್ ಪ್ರತಿರೋಧ ಅಂಗವಾಗಿ ಬ್ರೇಕ್ ದಿ ಚೈನ್ ಸಂಹಿತೆ ಕಡ್ಡಾಯವಾಗಿ ಪಾಲಿಸಬೇಕು. ಈ ಕೆಳಗೆ ತಿಳಿಸಲಾದ ಪೆÇಲೀಸ್ ಠಾನೆಗಳ ವ್ಯಾಪ್ತಿಯಲ್ಲಿ ಮತ್ತು ಸಾರ್ವಜನಿಕ ಕೇಂದ್ರಗಳಲ್ಲಿ 5 ಮಂದಿಗಿಂತ ಅಧಕ ಜನ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ, ಪರಪ್ಪ, ಒಡಯಂಚಾಲ್, ಪನತ್ತಡಿ ಪೇಟೆ ವ್ಯಾಪ್ತಿಗಳಲ್ಲೂ 5 ಮಂದಿಗಿಂತ ಅಧಿಕ ಜನ ಸೇರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಲಾಗಿದೆ. 

    ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಈ ಆದೇಶದ ಜಾರಿಯ ಖಚಿತತೆ ನಡೆಸಬೇಕು. ಜನ ಸೇರುವ ಸಾರ್ವಜನಿಕ ಪ್ರದೇಶಗಳಾದ ಮಾರುಕಟ್ಟೆ, ಬಸ್ ನಿಲ್ದಾಣ, ಬಸ್ ಗಾಗಿ ಕಾದು ನಿಲ್ಲು ತಾಣಗಳು ಸಹಿತ ಕೇಂದ್ರಗಳಲ್ಲಿ ದಿನಕ್ಕೆ ಕನಿಷ್ಠ ಒಂದು ಬಾರಿ ರೋಗಾಣುಮುಕ್ತ  ಚಟುವಟಿಕೆ ನಡೆಸುವಂತೆ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗಳಿಗೆ ಆದೇಶ ನೀಡಲಾಗಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries