HEALTH TIPS

ಆಸ್ತಿ ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

      ನವದೆಹಲಿ: ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದ ಸ್ವಾಮಿತ್ವ ಯೋಜನೆಯ ಮೂಲಕ ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ. 

     ಈ ಕಾರ್ಡ್ ಗಳು ಹಳ್ಳಿಗರ ಮನೆಗಳು ಮತ್ತು ಅವರು ಹೊಂದಿರುವ ಸುತ್ತಮುತ್ತಲಿನ ಪ್ರದೇಶಗಳ ಆಸ್ತಿ ಹಕ್ಕುಪತ್ರಗಳ ಭೌತಿಕ ಪ್ರತಿಗಳಾಗಲಿವೆ. ಏಪ್ರಿಲ್ ನಲ್ಲಿ ಆರಂಭಿಸಿದ ಸ್ವಾಮಿತ್ವ ಯೋಜನೆ ಗ್ರಾಮೀಣ ಜನರು ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಅವಕಾಶ ನೀಡಲಿದೆ. ಯೋಜನೆಯಿಂದ 6.62 ಲಕ್ಷ ಗ್ರಾಮಗಳಿಗೆ ಲಾಭವಾಗಲಿದ್ದು, ಯೋಜನೆಯಡಿಯಲ್ಲಿ ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ. 

      ಯೋಜನೆಯಲ್ಲಿ ಉತ್ತರಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44, ಉತ್ತರಾಖಂಡದ 50 ಮತ್ತು ಕರ್ನಾಟಕದ 2 ಗ್ರಾಮಗಳು ಸೇರಿ ಒಟ್ಟು 763 ಗ್ರಾಮಗಳು ಫಲಾನುಭವಿಸಿಗಳು ಯೋಜನೆಯ ಲಾಭವನ್ನು ಪಡೆಯಲಿದ್ದಾರೆ. 

       ಮಹಾರಾಷ್ಟ್ರ ರಾಜ್ಯವನ್ನು ಹೊರತುಪಡಿಸಿ ಉಳಿದ ರಾಜ್ಯದಳ ಫಲಾನುಭವಿಗಳು ಒಂದೇ ದಿನದಲ್ಲಿ ಪ್ರಾಪರ್ಟಿ ಕಾರ್ಡ್'ಗಳ ಭೌತಿಕ ಪ್ರತಿಗಳನ್ನು ಸ್ವೀಕರಿಸಲಿದ್ದಾರೆ. ಪ್ರಾಪರ್ಟಿ ಕಾರ್ಡ್'ನ ಅತ್ಯಲ್ಪ ವೆಚ್ಚವನ್ನು ಮರುಪಡಿಯುವ ವ್ಯವಸ್ಥೆಯನ್ನು ಮಹಾರಾಷ್ಟ್ರ ಹೊಂದಿರುವುದರಿಂದ ಒಂದು ತಿಂಗಳ ಕಾಲಾವಕಾಶ ತೆಗೆದುಕೊಂಡಿದೆ. 

      ಸ್ವಾಮಿತ್ವ ಯೋಜನೆ ದೇಶದ ಗ್ರಾಮೀಣ ಭಾಗದ ಬದಲಾವಣೆಗೆ ಐತಿಹಾಸಿಕ ನಡೆಯಾಗಿದೆ: ಪ್ರಧಾನಿ ಮೋದಿ
      ಯೋಜನೆಗೆ ಚಾಲನೆ ನೀಡಿದ ಬಳಿಕ ಸ್ವಾಮಿತ್ವ‘ ಯೋಜನೆಯಡಿ ಆಯ್ಕೆಯಾದ ಗ್ರಾಮಗಳ ಕೆಲ ಫಲಾನುಭವಿಗಳ ಜೊತೆಗೂ ಪ್ರಧಾನಿ ಮೋದಿ ಇದೇ ವೇಳೆ ಸಂವಾದ ನಡೆಸಿದರು.

     ಈ ವೇಳೆ ಮಾತನಾಡಿರುವ ಮೋದಿಯವರು, ಸ್ವಾಮಿತ್ವ ಯೋಜನೆಯಡಿ ಗ್ರಾಮೀಣ ಭಾಗದ ಜನರಿಗೆ ಆಸ್ತಿ ಕಾರ್ಡ್‌ಗಳನ್ನು ವಿತರಿಸುವ ಯೋಜನೆ ಗ್ರಾಮೀಣ ಭಾರತದ ಬದಲಾವಣೆಯ ಐತಿಹಾಸಿಕ ನಡೆಯಾಗಿದೆ ಎಂದು ಹೇಳಿದ್ದಾರೆ. 

     ಈ ಯೋಜನೆ ಜಾರಿಯಿಂದ ಗ್ರಾಮೀಣ ಭಾಗದ ಚಿತ್ರಣವೇ ಬದಲಾಗಲಿದ್ದು, ಗ್ರಾಮೀಣ ಭಾಗದಲ್ಲಿ ದೊಡ್ಡ ಪರಿವರ್ತನೆಗೆ ಈ ಯೋಜನೆ ಕಾರಣವಾಗಲಿದೆ ಎಂದು ಹೇಳಿದರು.

      ತಮ್ಮ ಆಸ್ತಿಗಳ ಮಾಲೀಕತ್ವವನ್ನು ಈ ಕಾರ್ಡ್‌ಗಳಿಂದ ಗ್ರಾಮೀಣ ಜನ ಸಾಲ ಮತ್ತಿತರ ಆರ್ಥಿಕ ನೆರವನ್ನು ಪಡೆಯಲು ಅನುಕೂಲವಾಗುತ್ತದೆ. ಅವರ ಆರ್ಥಿಕ ಪರಿಸ್ಥಿತಿಯಲ್ಲೂ ದೊಡ್ಡಮಟ್ಟದ ಬೆಳವಣಿಗೆ, ಬದಲಾವಣೆಗಳು ಆಗುತ್ತವೆ ಎಂದು ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries