HEALTH TIPS

ಮಾತೃಭಾಷೆಯಲ್ಲೇ ಶಿಕ್ಷಣ: ಸುಪ್ರೀಂಕೋರ್ಟ್ ಹೇಳಿದ್ದೇನು?

       ನವದೆಹಲಿ: ಮಕ್ಕಳಿಗೆ ಶಿಕ್ಷಣ ಮಾತೃಭಾಷೆಯಲ್ಲೇ ಕೊಡಬೇಕೋ ಬೇಡವೋ ಎಂಬ ವಿಷಯ ದೀರ್ಘಕಾಲದಿಂದ ಕಗ್ಗಂಟಾಗಿಯೇ ಉಳಿದಿದೆ. ಮಾತ್ರವಲ್ಲ ಈ ವಿಷಯದಲ್ಲಿ ಆಗಾಗ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇರುವುದರಿಂದ, ಮಾತೃಭಾಷೆಯಲ್ಲಿ ಶಿಕ್ಷಣ ಕುರಿತ ವಿಚಾರ ಇನ್ನೂ ಇತ್ಯರ್ಥವಾಗಿಲ್ಲ.

       ಇದೀಗ ಈ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಸುಪ್ರೀಂಕೋರ್ಟ್​ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಒಂದರಿಂದ ಐದನೇ ತರಗತಿವರೆಗೆ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ಸಂಬಂಧ ಅಲ್ಲಿನ ಹೈಕೋರ್ಟ್​ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

          ಹೈಕೋರ್ಟ್​ ಆದೇಶ ಮಕ್ಕಳ ಮೇಲೆ ದುಷ್ಪರಿಣಾಮ ಬೀಳುತ್ತದೆ. ಎಲ್ಲ ಮಕ್ಕಳೂ ಇಂಗ್ಲಿಷ್​ನಲ್ಲೇ ಶಿಕ್ಷಣ ಪಡೆಯಲು ಬಯಸುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲ ಕೆ.ವಿ.ವಿಶ್ವನಾಥನ್​ ವಾದ ಮಂಡಿಸಿದರು.
       ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್​.ಬೋಪಣ್ಣ, ವಿ. ರಾಮಸುಬ್ರಮಣಿಯನ್​ ಅವರಿದ್ದ ಪೀಠ ವಾದವನ್ನು ಆಲಿಸಿ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಮಕ್ಕಳು ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವುದು ಅತ್ಯಗತ್ಯ ಎಂದ ಪೀಠ, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries