ಕಾಸರಗೋಡು: ಚೆಂಗಳ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ಅ.1ರಂದು ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸುವರು. ನವೀಕೃತ ನೂತನ ಬ್ಲಾಕನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್ ಉದ್ಘಾಟಿಸುವರು. ಆರ್.ಆರ್.ಎಂ. ಚೆಂಗಳ ಆ್ಯಪ್‍ನ್ನು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಉದ್ಘಾಟಿಸುವರು. ಪಂಚಾಯತ್ ಐ.ಎಸ್.ಒ. ಘೋಷಣೆಯನ್ನು ಕಾಸರಗೋಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಿ.ಎಚ್.ಮುಹಮ್ಮದ್ ಕುಂಞÂ ಚಾಯಿಂಡಡಿ ನಡೆಸುವರು. ಮಾಜಿ ಸಚಿವ ಸಿ.ಟಿ.ಅಹಮ್ಮದಾಲಿ, ಪಂಚಾಯತ್ ಅಸೊಸಿಯೇಶನ್ ಅಧ್ಯಕ್ಷ ಎ.ಎ.ಜಲೀಲ್ ಮುಖ್ಯ ಅತಿಥಿಯಾಗಿರುವರು. ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಷಾಹಿನಾ ಸಲೀಂ ಅಧ್ಯಕ್ಷತೆ ವಹಿಸುವರು.