HEALTH TIPS

ವಯನಾಡ್: ಕೋವಿಡ್ ನಿಯಂತ್ರಣ ಕುರಿತ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿ

       ವಯನಾಡ್: ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಂಸದ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ತಿಳಿಸಿದೆ.

        ವಯನಾಡ್‌ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಅವರು, ಮಲಪ್ಪುರಂ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಕೋವಿಡ್-9 ಪರಾಮರ್ಶೆ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಸೋಮವಾರ ಕೇರಳಕ್ಕೆ ತೆರಳಿರುವ ಅವರು ಬುಧವಾರದ ವರೆಗೆ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಇರಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಾಮರ್ಶೆ ಈ ಭೇಟಿಯ ಪ್ರಮುಖ ಉದ್ದೇಶ ಎಂದು ಪಕ್ಷದ ಮೂಲಗಳು ತಿಳಿಸಿವೆ.

        ಈ ಮಧ್ಯೆ, ರಾಜಕೀಯ ಕಾರಣಕ್ಕಾಗಿ ತಮ್ಮನ್ನು ಸಭೆಗೆ ಹಾಜರಾಗದಂತೆ ಸೂಚಿಸಲಾಗಿದೆ ಎಂದು ವಯನಾಡ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆರೋಪಿಸಿದ್ದಾರೆ. ಸಂಸದರು, ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಭಾಗವಹಿಸುವಂತೆ ತಮ್ಮನ್ನು ಆಹ್ವಾನಿಸಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ಸಭೆಗೆ ಹಾಜರಾಗುವ ಅಗತ್ಯವಿಲ್ಲ ಎಂಬ ಸಂದೇಶ ಬಂದಿದೆ ಎಂದು ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries