ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಈ ಹಿಂದೆ ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು. ಇದೀಗ ಕೊರೋನಾ ಪರೀಕ್ಷೆಗೊಳಗಾಗಿದ್ದು, ನಾನು ಹಾಗೂ ನನ್ನ ಪತ್ನಿ ಇಬ್ಬರೂ ಕ್ವಾರಂಟೈನ್'ನಲ್ಲಿದ್ದೇವೆ. ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆಂದು ಟ್ರಂಪ್ ಹೇಳಿದ್ದರು.
ಇದರಂತೆ ಇದೀಗ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ನನಗೆ ಹಾಗೂ ಅಮೆರಿಕಾದ ಪ್ರಥಮ ಮಹಿಳೆಗೆ ಕೊರೋನಾ ವೈರಸ್ ದೃಢಪಟ್ಟಿದೆ. ಕ್ವಾರಂಟೈನ್ ಪ್ರಕ್ರಿಯೆ ಆರಂಭವಾಗಿದ್ದು, ಚಿಕಿತ್ಸೆ ಪ್ರಕ್ರಿಯೆಗಳೂ ಆರಂಭವಾಗುತ್ತಿವೆ. ಒಟ್ಟಿಗೆ ಚಿಕಿತ್ಸೆ ಪಡೆಯುತ್ತಿದ್ದೇವೆಂದು ಟ್ರಂಪ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.