ಕರ್ನಾಟಕ ತುಳು ಅಕಾಡೆಮಿಯ ಸಹಕಾರದೊಂದಿಗೆ, ಐಲೇಸ ಬೆಂಗಳೂರು ಮತ್ತು ತುಳುವಲ್ರ್ಡ್ ಮಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ "ಪು.ವೆಂ.ಪು. ನೂತ್ತೊಂಜಿ ನೆಂಪು" ಎಂಬ ವೈವಿಧ್ಯಮಯ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10 ರಿಂದ ಮಂಗಳೂರಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಿರಿ ಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಪಿ. ಎಸ್ ಎಡಪಡಿತ್ತಾಯ ವೈಸ್ ಚಾನ್ಸಲರ್ ಮಂಗಳೂರು ವಿಶ್ವವಿದ್ಯಾನಿಲಯ ಇವರು ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ಸಾರ್ ಅವರು ವಹಿಸಲಿದ್ದಾರೆ. ಖ್ಯಾತ ವಿದ್ವಾಂಸರಾದ ಡಾ. ಪಾದೇಕಲ್ಲು ವಿಷ್ಣುಭಟ್ ಮತ್ತು ಪ್ರಶಸ್ತಿ ವಿಜೇತ ಚಿತ್ರಕಲಾವಿದ ಹಾಗೂ ಕೇರಳ ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಎಸ್. ಪುಣಿಂಚತ್ತಾಯರವರು ಡಾ. ವೆಂಕಟರಾಜ ಪುಣಿಂಚತ್ತಾಯ ಅವರ ನೆನಪನ್ನು ಮಾಡಲಿದ್ದಾರೆ.