HEALTH TIPS

ಮೈಸೂರು ದಸರಾ: ಐತಿಹಾಸಿಕ ಜಂಬೂ ಸವಾರಿ ಇಂದು- ನಂದಿ ಧ್ವಜಕ್ಕೆ ಕರ್ನಾಟಕ ಸಿಎಂ ಯಡಿಯೂರಪ್ಪ ಪೂಜೆ

  

        ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಿರ್ಣಾಯಕ ಹಂತ ತಲುಪಿದ್ದು, ಇಂದು ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

           ಕೋವಿಡ್ ಸೋಂಕು ನಿಯಂತ್ರಣ ಕ್ರಮಗಳ ನಡುವೆ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಜಂಬೂ ಸವಾರಿ ಅರಮನೆಗೆ ಮಾತ್ರ ಸೀಮಿತವಾಗಿದೆ.

  ಇಂದು ನಡೆಯಲಿರುವ ಜಂಬೂ ಸವಾರಿಗೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು ತಿಳಿಸಿದ್ದಾರೆ.

ಆಯುಧಪೂಜೆಯ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ನಡೆಯುತ್ತಿರುವ ಅರಮನೆಗೆ ಭಾನುವಾರ ಭೇಟಿ ನೀಡಿ ಗಜ ಪಡೆಗಳಿಗೆ ಪೆÇೀಜೆ ಸಲ್ಲಿಸಿ ನಂತರ ಮಾತನಾಡಿದ ಅವರು, ಕೊವಿಡ್ 19 ರ ಸಲಹ ಸಮಿತಿಯವರು ನೀಡಿರುವ ಸಲಹೆ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸುತ್ತಿದ್ದು, ಜಂಬೂಸವಾರಿ ಕಾರ್ಯಕ್ರಮಕೆ 300 ಜನರಿಗಷ್ಟೆ ಅನುಮತಿ ನೀಡಲಾಗಿದೆ ಎಂದರು. 

      ಇಂದು ಮಧ್ಯಾಹ್ನ 2.59ಕ್ಕೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯಲ್ಲಿ ವಿಶೇಷವಾಗಿ ಅಲಂಕೃತಗೊಂಡ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ವೇಳೆ ಸಿಎಂ ಸೇರಿ ಆರು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

       ಈ ಬಾರಿ ಜಂಬೂಸವಾರಿ ಮೆರವಣಿಗೆ ಅರಮನೆಗೆ ಮಾತ್ರ ಸೀಮಿತವಾಗಿದ್ದು, 30 ರಿಂದ 40 ನಿಮಿಷಗಳ ಒಳಗೆ ಮುಗಿಯಲಿದೆ. ಸೋಮವಾರ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ ಸಂಚಾರಕ್ಕೆ ನಿಬರ್ಂಧ ವಿಧಿಸಲಾಗಿದೆ.

      ಆಹ್ವಾನಿತರಿಗೆ ಮಾತ್ರ ಅರಮನೆ ಒಳಗಡೆ ಪ್ರವೇಶವಿದ್ದು, ಸಾರ್ವಜನಿಕರಿಗೆ ಅರಮನೆ ಪ್ರವೇಶ ಇರುವುದಿಲ್ಲ. ಜಂಬೂಸವಾರಿ ದಿನ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ ಸಂಚಾರಕ್ಕೆ ನಿಬರ್ಂಧ ಇರುತ್ತದೆ. ಜಂಬೂಸವಾರಿಯಲ್ಲಿ ಭಾಗವಹಿಸುವ ಕಲಾವಿದರು ವೀರಗಾಸೆ, ನಾದಸ್ವರ, ಸಾಂಸ್ಕøತಿಕ ತಂಡ, ಅಶ್ವಪಡೆ, ಪೆÇಲೀಸ್ ಬ್ಯಾಂಡ್, ಒಂದು ಸ್ತಬ್ಧ ಚಿತ್ರದಲ್ಲಿ ಭಾಗವಹಿಸುವ ಜನರಿಗೆ ಮಾತ್ರ ಅರಮನೆ ಒಳಗೆ ಪ್ರವೇಶ ಇರುತ್ತದೆ. ಉಳಿದ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries