ಶ್ರೀನಗರ: ಕುಲ್ಗಾಂ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಿದಾ ಹುಸೇನ್, ಉಮರ್ ರಶೀದ್ ಮತ್ತು ಉಮರ್ ರಂಜಾನ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ.
ಕುಲ್ಗಾಂ ಜಿಲ್ಲೆಯ ಖಾಜಿಗುಂಡ್‍ನ ವೈ ಕೆ ಪೆÇರಾ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ)ಯ ಮೂವರು ಮುಖಂಡರನ್ನು ಹತ್ಯೆ ಮಾಡಲಾಗಿದೆ.
ವೈ ಕೆ ಪೆÇರಾದಲ್ಲಿ ಮೂವರು ವ್ಯಕ್ತಿಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ, ಅವರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇತರ ಇಬ್ಬರನ್ನು ಖಾಜಿಗುಂಡ್‍ನ ತುರ್ತು ಆಸ್ಪತ್ರೆಗೆ ಸ್ಥಳಾಂತರಿಸಿದ್ದು ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.ದಾಳಿಕೋರರನ್ನು ಬಂಧಿಸಲು ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ನಡೆಸಿದೆ. ಈ ನಡುವೆ ಕಾರ್ಯಕರ್ತರ ಮೇಲಿನ ದಾಳಿಯನ್ನು ಬಿಜೆಪಿ ಖಂಡಿಸಿದೆ.ಇತ್ತೀಚೆಗೆ, ಕಾಶ್ಮೀರದಲ್ಲಿ ಆಡಳಿತ ಪಕ್ಷಕ್ಕೆ ಸಂಬಂಧಿಸಿದ ಹಲವಾರು ನಾಯಕರ ಮೇಲೆ ಹಲ್ಲೆ ನಡೆದಿದೆ.
ಜುಲೈನಲ್ಲಿ, ಜಮ್ಮು ಮತ್ತು ಕಾಶ್ಮೀರದ ಬಂಡಿಪೆÇೀರಾ ಜಿಲ್ಲೆಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನ ನಡೆದು ಬಿಜೆಪಿ ಮುಖಂಡ ಶೇಖ್ ವಸೀಮ್ ಬ್ಯಾರಿ ಮತ್ತು ಅವರ ಇಬ್ಬರು ಬೆಂಬಲಿಗರು ಸಾವನ್ನಪ್ಪಿದ್ದರು. ಬ್ಯಾರಿ ಈ ಹಿಂದೆ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು.