ಅನಂತ್‍ನಾಗ್: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಉಗ್ರರು ಅಟ್ಟಹಾಸ ಮೆರೆದಿದ್ದು, ಪೆÇಲೀಸ್ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೆನಾಲ್ವಾನ್‍ನಲ್ಲಿ ಸೋಮವಾರ ಸಂಜೆ ಪ್ರಾರ್ಥನೆ ಸಲ್ಲಿಸಿ ಮಸೀದಿಯಿಂದ ಮನೆಗೆ ತೆರಳುತ್ತಿದ್ದ ಇನ್ಸ್‍ಪೆಕ್ಟರ್ ಮೊಹಮ್ಮದ್ ಅಶ್ರಫ್ ಮೇಲೆ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಗಾಯಾಳು ಇನ್ಸ್ ಪೆಕ್ಟರ್ ಅಶ್ರಫ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಪೆÇಲೀಸರು ಮತ್ತು ಸೇನಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.