HEALTH TIPS

ಕೇರಳದಲ್ಲಿ ಕೋವಿಡ್‍ನ ನೈಜತೆ ಏನು?-ಸಕಾರಾತ್ಮಕ ದರ ಶೇ.10ಕ್ಕಿಂತ ಕೆಳಗೆ- ಮರಣ ಪ್ರಮಾಣ ಏರಿಕೆ!

   

       ತಿರುವನಂತಪುರ: ಇತರ ರಾಜ್ಯಗಳಲ್ಲಿ ಇತ್ತೀಚೆಗೆ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದ್ದರೆ, ಕೇರಳದ ಅಂಕಿ ಅಂಶಗಳು ಆತಂಕಕಾರಿಯಾಗಿ ಏರುಗತಿಯಲ್ಲೇ ಮುಂದುವರಿಯುತ್ತಿದೆ. ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳವಿದ್ದರೂ, ಸಾವಿನ ಸಂಖ್ಯೆಯನ್ನು ನಿಯಂತ್ರಿಸಲಾಗದಿರುವುದು ಕಂಡುಬಂದಿದೆ. ಸಂಪರ್ಕದ ಮೂಲಕ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳ ಮತ್ತು ಆರೋಗ್ಯ ಕಾರ್ಯಕರ್ತರಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದು ನಿಯಂತ್ರಣ ಪ್ರಕ್ರಿಯೆಗಳಿಗೆ ಅಡ್ಡಿಯಾಗಿದೆ. ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳದೊಂದಿಗೆ, ಮನೆ ಮತ್ತು ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಮತ್ತು ಕ್ವಾರಂಟೈನ್ ನಲ್ಲಿರುವವರ ಸಂಖ್ಯೆ ಹೆಚ್ಚುತ್ತಿದೆ. ಈ ಮಧ್ಯೆ ನಿನ್ನೆ(ಗುರುವಾರ)ಯ ಅಂಕಿ ಅಂಶಗಳಗಳ ಪ್ರಕಾರ ರಾಜ್ಯದಲ್ಲಿ ಕೋವಿಡ್ ಸಕಾರಾತ್ಮಕತೆ ಕಡಿಮೆಯಾಗುತ್ತಿದೆ ಎಂದು ತೋರಿಸುತ್ತವೆ.

                ಸಕಾರಾತ್ಮಕತೆ ಪ್ರಮಾಣವು ಹತ್ತು ಪ್ರತಿಶತಕ್ಕಿಂತ ಕಡಿಮೆ: 

      ರಾಜ್ಯದಲ್ಲಿ ಕೋವಿಡ್ ಸಕಾರಾತ್ಮಕತೆ ಪ್ರಮಾಣವು ಶೇಕಡಾ ಹತ್ತು ಕ್ಕಿಂತ ಕಡಿಮೆಯಾಗುತ್ತಿರುವುದು ಅಲ್ಪ ನೆಮ್ಮದಿಗೆ ಕಾರಣವಾಗಿದೆ. ರಾಜ್ಯದಲ್ಲಿ ನಿನ್ನೆ ಸಕಾರಾತ್ಮಕ ದರವು ಶೇಕಡಾ 9.68 ಆಗಿದೆ. ಕಳೆದ 24 ಗಂಟೆಗಳಲ್ಲಿ 57,202 ಮಾದರಿಗಳನ್ನು ಪರೀಕ್ಷಿಸಿದ್ದು, ಅವುಗಳಲ್ಲಿ 5537 ಮಂದಿಗೆ ಸೋಂಕು ದೃಢಪಡಿಸಲಾಗಿದೆ. ಆರೋಗ್ಯ ಇಲಾಖೆಯ ಪ್ರಕಾರ ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದೆ.

               ಮರಣ ಪ್ರಮಾಣ ಕಡಿಮೆಯಾಗುವುದೇ?:

    ದೀರ್ಘ ಕಾಲಗಳ ಬಳಿಕ ಕೋವಿಡ್ ಪಾಸಿಟಿವಿಟಿ ದರ 10 ಕ್ಕಿಂತ ಕಡಿಮೆಯಾಗುವ ವರದಿ ಬರುತ್ತಿದ್ದು ಸಾವಿನ ಸಂಖ್ಯೆ ಕುಸಿಯಲಿದೆ ಎಂದು ಆರೋಗ್ಯ ಇಲಾಖೆ ಆಶಿಸುತ್ತಿದೆ. ಹಾಟ್‍ಸ್ಪಾಟ್‍ಗಳ ಸಂಖ್ಯೆಯೂ ಕಡಿಮೆ. ನಿನ್ನೆ ನಾಲ್ಕು ಹೊಸ ಪ್ರದೇಶಗಳನ್ನು ಹಾಟ್‍ಸ್ಪಾಟ್ ಪಟ್ಟಿಗೆ ಸೇರಿಸಲಾಗಿದ್ದು, 10 ಪ್ರದೇಶಗಳನ್ನು ಕೈಬಿಡಲಾಗಿದೆ. ಪ್ರಸ್ತುತ ಒಟ್ಟು ಹಾಟ್‍ಸ್ಪಾಟ್‍ಗಳ ಸಂಖ್ಯೆ 616 ಮಾತ್ರವಿದೆ.  

                 ಕೋವಿಡ್ ಪ್ರಕರಣಗಳಲ್ಲಿನ ಬದಲಾವಣೆ ಮುಂದುವರೆದಿದೆ:

       ಕೋವಿಡ್ ಅಂಕಿಅಂಶಗಳು ರಾಜ್ಯದಲ್ಲಿ ಪ್ರತಿದಿನವೂ ಬದಲಾಗುತ್ತಲೇ ಇರುತ್ತವೆ. ಪರೀಕ್ಷೆಗಳ ಸಂಖ್ಯೆಯಲ್ಲಿನ ಇಳಿಕೆ ದಿನಕ್ಕೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತವನ್ನು ಉಂಟುಮಾಡುತ್ತದೆ. ಈಗ ಒಂದು ಹಂತದಲ್ಲಿ ರೋಗಿಗಳ ಸಂಖ್ಯೆ 95000 ಕ್ಕೆ ಇಳಿದಿದೆ. ಕಳೆದ 24 ಗಂಟೆಗಳಲ್ಲಿ 57,202 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. 77,813 ಜನರಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 4,28,529 ಜನರನ್ನು ಕೋವಿಡ್‍ನಿಂದ ಮುಕ್ತಗೊಳಿಸಲಾಗಿದೆ.

                     ಕೇರಳಕ್ಕೆ ನವೆಂಬರ್ ನಿರ್ಣಾಯಕ?!

       ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ. ಅಕ್ಟೋಬರ್ ಮಧ್ಯದ ಹೊತ್ತಿಗೆ, ಈ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಕ್ಷೀಣಿಸಲು ಪ್ರಾರಂಭಿಸಿದವು. ಮರಣ ಪ್ರಮಾಣವೂ ಕಡಿಮೆ. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ದಿನಕ್ಕೆ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ಪ್ರಸ್ತುತ ವರದಿಯಾಗುತ್ತಿದೆ.  ನವೆಂಬರ್ ಅಂತ್ಯದ ವೇಳೆಗೆ ಈ ಅಂಕಿಅಂಶಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಆಶಿಸಲಾಗಿದೆ. ಕೋವಿಡ್ ಸಕಾರಾತ್ಮಕತೆಯು ಕಡಿಮೆಯಾಗುತ್ತಿರುವುದು ಉತ್ತಮ ಸಂಕೇತವಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries