ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 37,975 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 480 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,34,218ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ 42,314 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 86,04,955ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 4,38,667 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.