HEALTH TIPS

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 45,230 ಸೋಂಕು ಪ್ರಕರಣಗಳು ದಾಖಲು, 82 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

             ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 45,230 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 82 ಲಕ್ಷ ಗಡಿ ದಾಟಿದೆ.

     ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು ಕಳೆದ 24 ಗಂಟೆಗಳ ಅವಧಿಲ್ಲಿ ದೇಶಾದ್ಯಂತ 45,230 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 82,29,313ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ದೇಶಾದ್ಯಂತ 496 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,22,607ಕ್ಕೆ ಏರಿಕೆಯಾಗಿದೆ.

     ಕಳೆದ 24 ಗಂಟೆಗಳ ಅವಧಿಯಲ್ಲಿ 53,285 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 75,44,798ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,61,908ಕ್ಕೆ ಕುಸಿದಿದೆ. 

    

    ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,55,800 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ದೇಶದ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 11,07,43,103ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries