ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,964 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 81,84,083ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ನಿನ್ನೆ ಒಂದೇ 470 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,22,111ಕ್ಕೆ ತಲುಪಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
81,84,083 ಮಂದಿ ಸೋಂಕಿತರ ಪೈಕಿ 74,91,513 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,70,458ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,91,239 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,98,87,303 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.