ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,100 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 88,14,579.ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಒಂದೇ ದಿನ 447 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 1,29,635ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.
ಈ ನಡುವೆ ನಿನ್ನೆ ಒಂದೇ ದಿನ 42,156 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿ ಒಟ್ಟು ಗುಣಮುಖರ ಸಂಖ್ಯೆ 82,05,728ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 4,79,216 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರಂತೆ ನಿನ್ನೆ ಒಂದೇ ದಿನ 8,05,589 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,48,36,819 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.