ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,810 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 93,92,920ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಇದೇ ವೇಳೆ ಒಂದೇ ದಿನ 496 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,36,696ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 93,92,920 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 42,298 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 88,02,267ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಇದೀಗ 4,53,956 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದಲ್ಲಿ ನಿನ್ನೆ ಒಂದೇ ದಿನ 12,83,449 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 13,95,03,803 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.