ದುಬೈ: ದೇಶದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ನೀಡುವುದಾಗಿ ಸೌದಿ ಅರೇಬಿಯದ ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ ಎಂದು ಸರಕಾರಿ ಸ್ವಾಮ್ಯದ ಟಿವಿ ವರದಿ ಮಾಡಿದೆ.
2021ರ ಅಂತ್ಯದ ವೇಳೆಗೆ ದೇಶದ ಶೇ.70ರಷ್ಟು ಜನಸಂಖ್ಯೆಯನ್ನು ಒಳಗೊಳ್ಳಲು ಸಾಕಷ್ಟು ಲಸಿಕೆಗಳನ್ನು ಹೊಂದುವ ಭರವಸೆ ಇದೆ ಎಂದು ಸಚಿವಾಲಯ ಹೇಳಿದೆ ಎಂದು ಸರಕಾರಿ ಟಿವಿ ಚಾನೆಲ್ ಟ್ವಿಟ್ಟರ್ ನಲ್ಲಿ ತಿಳಿಸಿದೆ.