ಮತ್ತೊಂದೆಡೆ 24 ಗಂಟೆಗಳಲ್ಲಿ 584 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,32,162ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈ ನಡುವೆ ನಿನ್ನೆ ಒಂದೇ ದಿನ 44,807 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,28,410ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,83,397 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,95,91,786 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.