ಪಾಟ್ನ: ಭಾರೀ ಕುತೂಹಲ ಕೆರಳಸಿರುವ ಬಿಹಾರ ವಿಧಾನಸಬೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. ಬೆಳಿಗ್ಗೆ 8 ಗಂಟೆಗೆ ಮತಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣಗಳು ದೊರೆಯುವ ನಿರೀಕ್ಷೆಗಳಿವೆ.
ಬಿಹಾರರದಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆದಿದ್ದು ಶೇ.56ರಷ್ಟು ಮತದಾನವಾಗಿದdog, 3,755 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ 122 ಸೀಟುಗಳ ಅಗತ್ಯವಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್'ಡಿಎ ಮೈತ್ರಿಕೂಟ ಹಾಗೂ ತೇಜಸ್ವಿ ಯಾದವ್ ನೇತೃತ್ವದ ಆರ್'ಜೆಡಿ-ಕಾಂಗ್ರೆಸ್ ಹಾಗೂ ಇತರ ಮೂರು ಪಕ್ಷಗಳನ್ನು ಒಳಗೊಂಡ ಮಹಾಗಠ ಬಂಧನ್ ಮಧ್ಯೇ ನೇರ ಹಣಾಹಣಣಿ ಏರ್ಪಟ್ಟಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಮಹಾಗಠಬಂಧನ್ ಬಹುಮತ ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ.
ಒಂದು ವೇಳೆ, ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಿ ಎನ್ಡಿಎ ಮೈತ್ರಿ ಕೂಟ ಗೆದ್ದರೆ ಬಿಜೆಪಿಗೆ ಭಾರೀ ಲಾಭವಾಗಲಿದೆ. ಅದು ಪಶ್ಚಿಮ ಬಂಗಾಳದ ಚುನಾವಣೆ ಅಥವಾ ರಾಷ್ಟ್ರ ರಾಜಕಾರಣದ ದೃಷ್ಟಿಯಿಂದ ಮಾತ್ರವಲ್ಲ. ಬಿಹಾರದಲ್ಲೂ ಸದ್ಯಕ್ಕೆ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ ಕ್ರಮೇಣ ಬಿಜೆಪಿಗೆ ಮುಖ್ಯಮಂತ್ರಿ ಪಟ್ಟ ದಕ್ಕಿಸಿಕೊಳ್ಳುವ ಪ್ರಯತ್ನಗಳಾಗಲಿವೆ. ನಿತೀಶ್ ಕುಮಾರ್ ಅವರ ಜೆಡಿಯುಗಿಂತ ಬಿಜೆಪಿ ಹೆಚ್ಚು ಸೀಟು ಗೆದ್ದರೆ ಈ ಲೆಕ್ಕಾಚಾರವನ್ನು ಜಾರಿಗೊಳಿಸುವುದು ಸುಲಭವಾಗಲಿದೆ.
ಈ ನಡುವೆ ಮಧ್ಯಪ್ರದೇಶದ 28 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ಏರ್ಪಟ್ಟಿದ್ದು, ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರ ಭವಿಷ್ಯವನ್ನೂ ಫಲಿತಾಂಶ ನಿರ್ಧರಿಸಲಿದೆ.