ಪಾಟ್ನಾ: ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಸತತ ಏಳನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ.
ಇಂದು ಸಂಜೆ 4.30ಕ್ಕೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ. ಬಿಹಾರ ರಾಜ್ಯಪಾಲ ಫೊಗು ಚವಾಣ್ ಅವರ ಭೇಟಿಯ ನಂತರ ನಿತೀಶ್ ಕುಮಾರ್ ಈ ಘೋಷಣೆ ಮಾಡಿದ್ದಾರೆ.
ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ನಿರಾಶಾದಾಯಕ ಪ್ರದರ್ಶನ ನೀಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನ ಒಪ್ಪಿಕೊಳ್ಳಲು ಹಿಂದೇಟು ಹಾಕಿದ್ದರು. ಎನ್ ಡಿಎ ಪಕ್ಷಗಳ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಮನವೊಲಿಸಿ ಅಧಿಕಾರ ಚುಕ್ಕಾಣಿ ನೀಡಲು ನಿರ್ಧರಿಸಿದ್ದಾರೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎನ್ ಡಿಎ ನಾಯಕರ ಮಹತ್ವದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಜೆಡಿಯು, ಬಿಜೆಪಿ, ಎಚ್ ಎ ಎಂ, ವಿಐಪಿ ಪಕ್ಷದ ಶಾಸಕರು ಆಯ್ಕೆ ಮಾಡಿದ್ದಾರೆ.