HEALTH TIPS

ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗೆ ಮೋದಿ ಸರ್ಕಾರ ಬದ್ಧ: ಅಮಿತ್ ಶಾ

      ನವದೆಹಲಿ: ರಾಷ್ಟ್ರೀಯ ಪತ್ರಿಕಾ ದಿನದ ಅಂಗವಾಗಿ ಶುಭಾಶಯ ಕೋರಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕೇಂದ್ರ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗೆ 'ಬದ್ಧವಾಗಿದೆ' ಎಂದು ತಿಳಿಸಿದ್ದಾರೆ.


     'ರಾಷ್ಟ್ರೀಯ ಪತ್ರಿಕಾ ದಿನದ ಶುಭಾಶಯಗಳು. ನಮ್ಮ ಮಹಾನ್‌ ದೇಶದ ಅಡಿಪಾಯವನ್ನು ಬಲಪಡಿಸಲು ಮಾಧ್ಯಮಗಳು ದಣಿವರಿಯದೆ ಶ್ರಮಿಸುತ್ತಿವೆ. ಮೋದಿ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗೆ ಬದ್ಧವಾಗಿದೆ ಮತ್ತು ಅದಕ್ಕೆ ತಡೆಯೊಡ್ಡುವವರನ್ನು ಪ್ರಬಲವಾಗಿ ವಿರೋಧಿಸುತ್ತದೆ. ಕೋವಿಡ್-19 ಸನ್ನಿವೇಶದಲ್ಲಿ ಮಾಧ್ಯಮದ ಪಾತ್ರವನ್ನು ಶ್ಲಾಘಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

          1966ರ ನವೆಂಬರ್‌ 16 ರಂದು ಭಾರತೀಯ ಪ್ರತಿಕಾ ಮಂಡಳಿ ಸ್ಥಾಪನೆಯಾದ ಸ್ಮರಣಾರ್ಥವಾಗಿ ಈ ದಿನವನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ.

ಇದೇ ವೇಳೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಟ್ವೀಟ್ ಮಾಡಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮಾಧ್ಯಮಗಳ ಪಾತ್ರ ದೊಡ್ಡದು ಎಂದು ಅಭಿಪ್ರಾಯಪಟ್ಟಿದ್ದಾರೆ. 'ಮಾಧ್ಯಮ ವೃತ್ತಿಯಲ್ಲಿರುವ ಎಲ್ಲರಿಗೂ ರಾಷ್ಟ್ರೀಯ ಪತ್ರಿಕಾ ದಿನದ ಶುಭಾಶಯಗಳು. ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮತ್ತು ನಾಗರಿಕರಿಗೆ ಮಾಹಿತಿ ನೀಡುವ, ಸಬಲರನ್ನಾಗಿಸುವಲ್ಲಿ ಮಾಧ್ಯಮಗಳ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಕೋವಿಡ್‌-19 ಸಾಂಕ್ರಾಮಿಕದ ಸಂದರ್ಭದಲ್ಲಿ ಜನರಿಗೆ ನಿರಂತರವಾಗಿ ಮಾಹಿತಿ ಒದಗಿಸಿದ್ದಕ್ಕಾಗಿ ಪತ್ರಕರ್ತರಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ' ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries