ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇಂಗ್ಲೀಷ್ ಸುದ್ದಿ ಮಾಧ್ಯಮವಾದ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಮುಂಬೈ ಪೆÇಲೀಸರು ಇಂದು ಬೆಳಗ್ಗೆ ಏಕಾಏಕಿ ಬಂಧಿಸಿದ್ದಾರೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್? ಗೋಸ್ವಾಮಿ ಮೇಲಿದೆ. ಅರ್ನಬ್ ಗೋಸ್ವಾಮಿ ಮತ್ತು ಇನ್ನಿಬ್ಬರು ತಮಗೆ 5.4 ಕೋಟಿ ರೂ. ಹಣ ನೀಡಬೇಕು. ಆ ಹಣ ನೀಡಲು ಅವರು ಒಪ್ಪುತ್ತಿಲ್ಲ. ಇದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಅನ್ವಯ್? ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗ ಸಾವನ್ನಪ್ಪಿರುವುದು ಗೊತ್ತಾಗುತ್ತಿದ್ದಂತೆ ಅನ್ವಯ್ ಅವರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.
ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿತ್ತು. 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಾಗಿದ್ದ ಕೇಸನ್ನು 2019ರಲ್ಲಿ ರಾಯಘಡ ಪೆÇಲೀಸರು ಕ್ಲೋಸ್ ಮಾಡಿದ್ದರು. ಆದರೆ, ಅನ್ವಯ್ ನಾಯಕ್ ಅವರ ಪುತ್ರಿ ಅದ್ನಯ ನಾಯಕ್ ನೀಡಿದ್ದ ಹೊಸ ದೂರಿಗೆ ಸಂಬಂಧಪಟ್ಟಂತೆ ಪ್ರಕರಣದ ಮರು ತನಿಖೆ ಮಾಡಲಾಗುವುದು ಎಂದು ಕಳೆದ ಮೇ ತಿಂಗಳಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಘೋಷಿಸಿದ್ದರು.
ಇದೇ ದೂರಿನ ಅನ್ವಯ ಇಂದು ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಲಾಗಿದೆ. ಪೆÇಲೀಸರು ತಾವು ಕಾನೂನಿನಂತೆ ಕೆಲಸ ನಿರ್ವಹಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ, ಈ ವಿವಾದ ಇದೀಗ ಸಾಮಾಜಿಕ ಜಾಲತಾಣದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಟ್ವಿಟರ್ ನಲ್ಲಿ ಪರ-ವಿರೋಧ ಚರ್ಚೆಗಳು ಗರಿಗೆದರಿವೆ. ಕೆಲವರು ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿರುವುದು ಖಂಡನೀಯ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ಸರಿ ಎಂದು ವಾದಿಸುತ್ತಿದ್ದಾರೆ.