ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಸ್ಮರಣೆಯ ಜೊತೆಗೆ ಮಕ್ಕಳ ದಿನಾಚರಣೆಗೆ ದೇಶದ ಮತ್ತು ನಾಡಿನ ಗಣ್ಯರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಅವರನ್ನು ಸ್ಮರಿಸಿ ಮಕ್ಕಳ ದಿನಾಚರಣೆಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
ಆಧುನಿಕ ಭಾರತಕ್ಕೆ ನೆಹರೂ ಅವರು ನೀಡಿದ ಅಪಾರವಾದ ಕೊಡುಗೆ ನೀಡಿದ್ದಾರೆ. ಮಕ್ಕಳ ದಿನಾಚರಣೆಯ ದಿನದಂದು ಅವರನ್ನು ಸ್ಮರಿಸೋಣ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.
ಇಂದು ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮ ದಿನವನ್ನು ಆಚರಿಸಲಾಗುತ್ತಿದೆ. ಸಹೋದರತೆ, ಸಮಾನತೆಯ ಮೌಲ್ಯಗಳನ್ನು ಕಟ್ಟಿಕೊಟ್ಟಿದ್ದಾರೆ. ಈ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನ ನಮ್ಮದಾಗಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವಪೂರ್ಣ ನಮನಗಳು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮತ್ತು ದೇಶದ ಪ್ರಥಮ ಪ್ರಧಾನಿಯಾಗಿ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ. ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.