ಕಾಸರಗೋಡು: ಐಸಿಎಆರ್-ಸಿಪಿಸಿಆರ್‍ಐ ನೇತೃತ್ವದಲ್ಲಿ ಆಯೋಜಿಸಿದ ವಿಜಿಲೆನ್ಸ್ ಜಾಗೃತಿ ಸಪ್ತಾಹ ಕಾರ್ಯಕ್ರಮ ಸಮಾರೋಪಗೊಂಡಿತು.
ಕಾಸರಗೋಡು ವಿಜಿಲೆನ್ಸ್ ಆ್ಯಂಡ್ ಆ್ಯಂಟಿ ಕರಪ್ಶನ್ ಬ್ಯೂರೋ ಡೆಪ್ಯೂಟಿ ಸುಪರಿಂಟೆಂಡೆಂಟ್ ಆಫ್ ಪೆÇಲೀಸ್ ಡಾ.ವಿ.ಬಾಲಕೃಷ್ಣನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಸಿಪಿಸಿಆರ್‍ಐ ನಿರ್ದೇಶಕಿ ಡಾ.ಅನಿತಾ ಕರುಣ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮೊಗ್ರಾಲ್‍ಪುತ್ತೂರು ಗ್ರಾಮ ಪಂಚಾಯತ್‍ನಲ್ಲಿ ಪ್ರತ್ಯೇಕವಾಗಿ ಜಾಗೃತಿ ಗ್ರಾಮ ಸಭೆಯನ್ನು ನಡೆಸಲಾಯಿತು. ಸಿಪಿಸಿಆರ್‍ಐ ವಿಜಿಲೆನ್ಸ್ ಆಫೀಸರ್ ಡಾ.ಎ.ಸಿ.ಮ್ಯಾಥ್ಯೂ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಆಡ್ಮಿನಿಸ್ಟ್ರೇಟಿವ್ ಆಫೀಸರ್ ಟಿ.ಇ.ಜನಾರ್ದನನ್ ವಂದಿಸಿದರು.