ಶ್ರೀನಗರ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಗೃಹ ಬಂಧನದಲ್ಲಿಲ್ಲ. ಆದರೆ, ಭದ್ರತಾ ಕಾರಣಗಳಿಂದಾಗಿ ಪುಲ್ವಾಮಾಗೆ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ನನ್ನನ್ನು ಮತ್ತೆ ಅಕ್ರಮವಾಗಿ ಬಂಧಿಸಲಾಗಿದೆ ಎಂದು ಮುಫ್ತಿ ಅವರು ಹೇಳಿಕೆ ನೀಡಿದ ಹಿನ್ನೆಲೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
'ಕಳೆದ 2 ದಿನಗಳಿಂದ ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಪಕ್ಷದ ಮುಖಂಡರನ್ನು ಭೇಟಿ ಮಾಡಲು ಜಮ್ಮು-ಕಾಶ್ಮೀರ ಸರ್ಕಾರ ನಿರಾಕರಿಸಿದೆ. ಪುಲ್ವಾಮಾದಲ್ಲಿ ವಹೀದ್ ಉರ್ ರೆಹಮಾನ್ ಕುಟುಂಬಸ್ಥರನ್ನು ಆಧಾರರಹಿತ ಆರೋಪದ ಮೇಲೆ ಬಂಧಿಸಲಾಗಿದೆ. ಜೊತೆಗೆ, ನನ್ನ ಮಗಳನ್ನು ಸಹ ಗೃಹಬಂಧನದಲ್ಲಿರಿಸಲಾಗಿದೆ ಎಂದು ಮುಫ್ತಿ ಆರೋಪಿಸಿದ್ದರು.