ನವದೆಹಲಿ: ರಾಜ್ಯಗಳಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರಗಳ ಪೂರ್ವಾನುಮತಿ ಪಡೆಯಲು ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ರಾಜ್ಯ ಸರ್ಕಾರಗಳ ಅನುಮತಿಯಿಲ್ಲದೆ ತನಿಖಾ ಸಂಸ್ಥೆಗಳ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಜೊತೆಗೆ ಕಾನೂನು ವ್ಯಾಪ್ತಿಯ ಅರಿವಿಲ್ಲದೆ ವಿವಿಧ ರಾಜ್ಯಗಳಲ್ಲಿ ಸಿಬಿಐ ಈಗಾಗಲೇ ನಡೆಸಿರುವ ತನಿಖೆಯ ಬಗ್ಗೆ ತೀರ್ವ ಖೇದ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡು ಈ ತೀರ್ಪು ನೀಡಿದೆ.
ಫೆಡರಲ್ ವ್ಯವಸ್ಥೆಯಲ್ಲಿ ರಾಜ್ಯಗಳು ಸಾಂವಿಧಾನಿಕ ಭರವಸೆಗಳನ್ನು ನಿರಾಕರಿಸುವಂತಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿತು. ಉತ್ತರ ಪ್ರದೇಶದ ಪ್ರಕರಣವೊಂದರಲ್ಲಿ ನ್ಯಾಯಾಲಯ ತೀರ್ಪು ನೀಡಿದೆ.
ವಿದೇಶಿ ಹಣಕಾಸು ನೆರವು ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿ ಕೇರಳದ ಲೈಫ್ ಮಿಷನ್ ಯೋಜನೆಗೆ ವಿದೇಶಿ ನೆರವು ದೊರೆತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಸರ್ಕಾರದ ಅನುಮತಿಯಿಲ್ಲದೆ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು.
ಇದರ ವಿರುದ್ಧ ಸರ್ಕಾರ ಹೈಕೋರ್ಟ್‌ನ್ನು ಸಂಪರ್ಕಿಸಿತ್ತು ಮತ್ತು ನ್ಯಾಯಾಲಯವು ಎರಡು ತಿಂಗಳ ಕಾಲ ತಡೆಯಾಜ್ಞೆ ನೀಡಿತ್ತು. ತರುವಾಯ, ಸಿಬಿಐನ ಪೂರ್ವಾನುಮತಿ ರದ್ದುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು.