ಆಲಪ್ಪುಳ: ಗಾಯಕ ವಿಜಯ್ ಯೇಸುದಾಸ್ ಅವರ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದ್ದು ಯಾರೂ ಗಾಯಗೊಳ್ಳದೆ ಪಾರಾಗಿದ್ದಾರೆ ಎಮದು ತಿಳಿದುಬಂದಿದೆ.
ನಿನ್ನೆ ರಾತ್ರಿ 11.30 ಕ್ಕೆ ರಾಷ್ಟ್ರೀಯ ಹೆದ್ದಾರಿಯ ತುರಾವೂರ್ ಜಂಕ್ಷನ್‍ನಲ್ಲಿ ಈ ಅಪಘಾತ ಸಂಭವಿಸಿದೆ. ತಿರುವನಂತಪುರಂನಿಂದ ಕೊಚ್ಚಿಗೆ ಸ್ನೇಹಿತರೊಡನೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆ ಕ್ರಾಸಿಂಗ್ ವೇಳೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಅಪಘಾತ ಉಂಟಾಯಿತು. ಡಿಕ್ಕಿಯ ಕಾರಣ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.