ಕಾಸರಗೋಡು: ಡಿ.14ರಂದು ನಡೆಯುವ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಚುನಾವಣೆ ಸಂಬಂಧ ಮಾತುಕತೆ ನಡೆಸುವ ಉದ್ದೇಶದಿಂದ ಕಾಸರಗೋಡು ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಕೋವಿಡ್ ಕಟ್ಟುನಿಟ್ಟುಗಳನ್ನು ಪಾಲಿಸಿ ಇಂದು(ನ.10) ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸುವರು. ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿರಬೇಕು.
ನೋಡೆಲ್ ಅಧಿಕಾರಿಗಳ ಸಭೆ:
ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಸಂಬಂಧ ಮಾಹಿತಿ ನೀಡಿಕೆ ಉದ್ದೇಶದಿಂದ ಕಾಸರಗೋಡು ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆ ಕೋವಿಡ್ ಕಟ್ಟುನಿಟ್ಟು ಪಾಲಿಸಿ ಇಂದು(ನ.10)ರಂದು ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸುವರು. ಎಲ್ಲ ನೋಡೆಲ್ ಅಧಿಕಾರಿಗಳೂ ಹಾಜರಿರಬೇಕು ಎಂದು ಸೂಚಿಸಿರುವರು.