ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2020 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು. ಈ ಮೂಲಕ ಅಭಿಮಾನಿಗಳಲ್ಲಿ ವಿರಾಟ್ ಬಳಗ ನಿರಾಸೆ ಮೂಡಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಶಕ್ತವಾಯಿತು.
ಎಬಿಡೀವಿಲಿಯರ್ಸ್ 56, ಆರೋನ್ ಫಿಂಚ್ 32, ಮೊಹಮ್ಮದ್ ಸಿರಾಜ್ 10 ರನ್ ಗಳಿಸಿದರು. ಸನ್ ರೈಸರ್ಸ್ ಹೈದ್ರಾಬಾದ್ ಪರ ಜೇಸನ್ ಹೋಲ್ಡರ್ 3, ತಂಗರಸು ನಟರಾಜನ್ 2, ಶಹಬಾಜ್ ನದೀಮ್ 1 ವಿಕೆಟ್ ಪಡೆದುಕೊಂಡರು.ಆರ್ ಸಿಬಿ ನೀಡಿದ ಸಾಧಾರಣ ಗುರಿ ಬೆನ್ನತ್ತಿದ್ದ ಸನ್ ರೈಸರ್ಸ್ ಹೈದ್ರಾಬಾದ್ ತಂಡ 19.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 132 ರನ್ ಕಲೆಹಾಕುವ ಮೂಲಕ ಗೆಲುವಿನ ನಗೆ ಬೀರಿತು. ನಸನ್ ರೈಸರ್ಸ್ ಪರ ಕೇನ್ ವಿಲಿಯಮ್ಸ್ ಆಕರ್ಷಕ ಅರ್ಧಶತಕ, ಜೇಸನ್ ಹೋಲ್ಡರ್ 24, ಮನೀಶ್ ಪಾಂಡೆ 24 ರನ್ ಗಳಿಸಿದರು.
ಆರ್ ಸಿಬಿ ಪರ ಮೊಹಮ್ಮದ್ ಸಿರಾಜ್ 2, ಅಡಮ್ ಜಂಪಾ 1, ಯಜ್ವೇಂದ್ರ ಚಹಾಲ್ 1 ವಿಕೆಟ್ ಪಡೆದರು.ಕೇನ್ ವಿಲಿಯಮ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಫೈನಲ್ ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ ರೈಸರ್ಸ್ ಹೈದ್ರಾಬಾದ್ ಸೆಣಸಾಟ ನಡೆಸಲಿದೆ.