HEALTH TIPS

ಶಬರಿಮಲೆ: ಮೂವರು ಪೊಲೀಸರಲ್ಲಿ ಕೋವಿಡ್ ಪಾಸಿಟಿವ್, ತೀವ್ರ ಕಟ್ಟೆಚ್ಚರ

            ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಸನ್ನಿಧಿಯಲ್ಲಿ ಸುರಕ್ಷತೆಗಾಗಿ ನಿಯೋಜಿಸಲಾಗಿರುವ ಮೂವರು ಪೆÇಲೀಸ್ ಸಿಬ್ಬಂದಿಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತೀವ್ರ ಕಟ್ಟೆಚ್ಚರದ ಸೂಚನೆ ನೀಡಿದ್ದಾರೆ.

         ಸನ್ನಿಧಾನ ಸಮೀಪದಲ್ಲಿ ಒಬ್ಬ ಸಿಬ್ಬಂದಿ ಮತ್ತು ಪಂಪಾ ಬಳಿ ನಿಯೋಜನೆಗೊಂಡ ಇಬ್ಬರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಈ ಎರಡು ಭಾಗಗಳು ಮತ್ತು ನಿಳಕ್ಕಳ್‍ನಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲು ಡಿಡಿಬಿ ಸೂಚಿಸಿದೆ.

       ತಿರುವಾಂಕೂರು ದೇವಸ್ವಂ ಮಂಡಳಿ, ಪೆÇಲೀಸರು, ಆರೋಗ್ಯ ಕಾರ್ಯಕರ್ತರು ಮತ್ತು ಕಂದಾಯ ಅಧಿಕಾರಿಗಳನ್ನು ಒಳಗೊಂಡ ಜಂಟಿ ಕಾರ್ಯಪಡೆಯು ದೇವಾಲಯದ ಮಂಡಳಿಯ ಸಿಬ್ಬಂದಿ ಹಾಗೂ ಪೆÇಲೀಸರು ಸೇರಿದಂತೆ ಸರ್ಕಾರಿ ಉದ್ಯೋಗಿಗಳ ಘಟಕ, ವಸತಿ ಪ್ರದೇಶಗಳಲ್ಲಿ ನಿಗಾವಹಿಸುತ್ತಿದೆ ಎಂದು ಶಬರಿಮಲೆ ದೇವಸ್ವಂನ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

       ಪ್ರತಿ ಪ್ರವೇಶ ಭಾಗಗಳಲ್ಲಿಯೂ ಭಕ್ತರು ಮತ್ತು ಸಿಬ್ಬಂದಿ ಸದಸ್ಯರನ್ನು ಥರ್ಮಲ್ ಸ್ಕ್ಯಾನರ್ ಬಳಸಿ ಪರೀಕ್ಷಿಸಲಾಗುತ್ತದೆ. ಸಿಬ್ಬಂದಿ ದ್ವಾರ, ಮಲ್ಲಿಕಾಪುರಂ ದೇವಸ್ಥಾನ ದ್ವಾರ, ದೇವಸ್ವಂ ಮೆಸ್ ದ್ವಾರ ಮತ್ತು ಅನ್ನದಾನ ಮಂಟಪಗಳ ಬಳಿ ಪರೀಕ್ಷೆ ನಡೆಯುತ್ತದೆ. ತಾತ್ಕಾಲಿಕ ನೌಕರರು ಮತ್ತು ಸರ್ಕಾರಿ ಉದ್ಯೋಗಿಗಳು ಸೇರಿದಂತೆ ದೇವಸ್ವಂ ನೌಕರರನ್ನು ಸಮೀಪದಿಂದ ಗಮನಿಸಲಾಗುತ್ತದೆ. ಅವರಲ್ಲಿ ಯಾವುದೇ ರೀತಿಯ ಲಕ್ಷಣ ಕಂಡುಬಂದರೂ ಸಮೀಪದ ಸರ್ಕಾರಿ ಆಸ್ಪತ್ರೆಗೆ ಕೋವಿಡ್ ಪರೀಕ್ಷೆಗಾಗಿ ಕಳುಹಿಸಲಾಗುತ್ತದೆ ಎಂದು ಹೇಳಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries