ನವದೆಹಲಿ: ಮೋದಿ ಸರ್ಕಾರ ನಕಲಿ ಎಫ್‍ಐಆರ್ ಮೂಲಕ ರೈತರ ಬಲವಾದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ, ವಿರೋಧಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಅಸಮಾನತೆ ವಿರುದ್ಧ ಧ್ವನಿ ಎತ್ತುವುದು ಅಪರಾಧವಲ್ಲಾ ಆದರೆ ಕರ್ತವ್ಯ ಎಂದಿದ್ದಾರೆ. ಪ್ರತಿಭಟನಾನಿರತ ರೈತರ ವಿರುದ್ಧ ಪೆÇಲೀಸರು ಎಫ್ ಐಆರ್ ದಾಖಲಿಸಿರುವ ಬಗ್ಗೆ ಮಾಧ್ಯಮ ವರದಿಯೊಂದನ್ನು ಹಾಕಿದ್ದಾರೆ.
ನಮಗೆ ಅದು 'ಜೈ ಕಿಸಾನ್' ಮತ್ತು ಅದು ಹಾಗೆಯೇ ಉಳಿಯುತ್ತದೆ "ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಜಾರಿಗೆ ಬಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು 'ದೆಹಲಿ ಚಾಲೋ' ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದರು.