ಗುರುಗ್ರಾಮ: ಕೊರೊನಾವೈರಸ್ ಸೋಂಕಿಗೆ ತುತ್ತಾಗಿ ಚೇತರಿಕೆ ಕಾಣುತ್ತಿದ್ದ ಕಾಂಗ್ರೆಸ್ಸಿನ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಕುಟುಂಬಸ್ಥರು ಹೇಳಿದ್ದಾರೆ.
71 ವರ್ಷದ ಪಟೇಲ್ ಅವರಿಗೆ ಅಕ್ಟೋಬರ್ 1ರಂದು ಕೊರೊನಾವೈರಸ್ ಪಾಸಿಟಿವ್ ಎಂದು ವರದಿ ಬಂದಿತ್ತು. ಆದರೆ, ಚಿಕಿತ್ಸೆ ಪಡೆದುಕೊಂಡು ಚೇತರಿಕೆ ಕಾಣುತ್ತಿದ್ದರು. ಆದರೆ, ಭಾನುವಾರದಂದು ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಆನಂದ್ ಶರ್ಮ, ಶಶಿ ತರೂರ್, ಅಶೋಕ್ ಗೆಹ್ಲೋಟ್ ಮುಂತಾದವರು ಟ್ವೀಟ್ ಮಾಡಿ ಅಹ್ಮದ್ ಪಟೇಲ್ ಆರೋಗ್ಯ ಸುಧಾರಣೆಗಾಗಿ ಶುಭ ಹಾರೈಸಿದ್ದಾರೆ.
ಕಾಂಗ್ರೆಸ್ ನಾಯಕರಾದ ಅಭಿಶೇಕ್ ಸಿಂಘ್ವಿ (61), ತರೂರ್ ಗೊಗಾಯ್ (86), ಮಣಿಪುರದ ಸಿಎಂ ಬಿರೇನ್ ಸಿಂಗ್ ಅವರಿಗೆ ಕೊವಿಡ್ 19 ಪಾಸಿಟಿವ್ ಆಗಿದೆ.