ಅಯೋಧ್ಯೆ: ಶ್ರೀ ರಾಮ ಮಂದಿರ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯಗೋಪಾಲ ದಾಸ್ ಅವರನ್ನು ಸೋಮವಾರ ಲಖನೌನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ತೊಂದರೆ ಅನುಭವಿಸಿದ ಕಾರಣ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಮಹಾಂತ ಅವರಿಗೆ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಕೂಡಲೇ ಅವರನ್ನು ಅಯೋಧ್ಯೆಯ ಸರ್ಕಾರಿ ಶ್ರೀರಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಂತರ ತೀವ್ರವಾದ ಉಸಿರಾಟದ ತೊಂದರೆ ಇದೆ ಎಂದು ಹೇಳಿದ ಕಾರಣ ಲಖನೌಗೆ ಸ್ಥಳಾಂತರಿಸಲಾಗಿದೆ. ಮಹಾಂತ ಅವರ ಆರೋಗ್ಯ ಸ್ಥಿರವಾಗಿದೆ. ಕೋವಿಡ್ 19 ಟೆಸ್ಟ್ ನೆಗೆಟಿವ್ ಬಂದಿದೆ ಎಂದು ಅಯೋಧ್ಯೆಯ ಜಿಲ್ಲಾ ದಂಡಾಧಿಕಾರಿ ಅನುಜ್ ಕುಮಾರ್ ಝಾ ಹೇಳಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ನಿಗಾವಹಿಸಲಾಗುತ್ತಿದ್ದು, ಬೆಳಗ್ಗೆ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಝಾ ತಿಳಿಸಿದ್ದಾರೆ.