ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹಿರಿಯ ಐಎಎಸ್ ಅಧಿಕಾರಿ ಉತ್ತಪಾಲ್ ಕುಮಾರ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ ನೇಮಕ ಮಾಡಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
ಉತ್ತಪಾಲ್ ಕುಮಾರ್ ಸಿಂಗ್ ಅವರು ಉತ್ತರಾಖಂಡ ಕೇಡರ್‌ನ 1986ರ ಬ್ಯಾಚಿನ ಐಎಎಸ್ ಅಧಿಕಾರಿ. ಸದ್ಯ ಸ್ನೇಹಲತಾ ಶ್ರೀವಾಸ್ತವ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಉತ್ತಪಾಲ್ ಸಿಂಗ್ ಅವರನ್ನು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಸದ್ಯ ಅವರು ಲೋಕಸಭಾ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.