ತಿರುವನಂತಪುರ: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೆÇಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಮಾನಹಾನಿಕರ ಹೇಳಿಕೆ ನೀಡುವವರ ವಿರುದ್ಧ ಸರಿಯಾದ ಶಿಕ್ಷೆ ವಿಧಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಭಾನುವಾರ ಸೈಬರ್ ಅಪರಾಧ ಪೆÇಲೀಸ್ ಠಾಣೆಗಳನ್ನು ಮುಖ್ಯಮಂತ್ರಿ ಉದ್ಘಾಟಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ಪೆÇಲೀಸ್ ದಿನಾಚರಣೆಯಂದು ನಡೆದ ಆನ್‍ಲೈನ್ ಸಮಾರಂಭದಲ್ಲಿ ಮುಖ್ಯಮಂತ್ರಿ ಸೈನಿಕರಿಗೆ ಶುಭ ಕೋರಿದರು.