ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಸಿಎಸ್‌ಐಆರ್ ಯುಜಿಸಿ ಎನ್‌ಇಟಿ ಜೂನ್ 2020ರ ಪರೀಕ್ಷಾ ಪ್ರವೇಶ ಪತ್ರವನ್ನು ರಿಲೀಸ್ ಮಾಡಿದೆ. ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೆಆರ್‌ಎಫ್ ಹುದ್ದೆಗಳ ನೇಮಕಾತಿ ನಡೆಸಲಾಗುವ ಪರೀಕ್ಷೆ ಇದಾಗಿದ್ದು ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಸಿಎಸ್‌ಐಆರ್ ಯುಜಿಸಿ ಎನ್‌ಇಟಿ ಪರೀಕ್ಷೆಯು ನವೆಂಬರ್ 19, 21, 26 ರಂದು ನಡೆಯಲಿದೆ. ಈ ಭಾರಿ ಒಟ್ಟು 2,62,692 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸಿಎಸ್‌ಐಆರ್ ಯುಜಿಸಿ ನೆಟ್ 2020ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://csirnet.nta.nic.in/webinfo/public/home.aspx?utm_source=DH-MoreFromPub&utm_medium=DH-app&utm_campaign=DH ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳಿಗೆ ಹೋಂ ಪೇಜ್ ಲಭ್ಯವಾದಲ್ಲಿ "Download Admit Card" ಎಂಬ ಆಯ್ಕೆಯ ಮೇಲೆ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಫಾರ್ಮ್ ನಂಬರ್, ಜನ್ಮ ದಿನಾಂಕ ಮತ್ತು ಸೆಕ್ಯುರಿಟಿ ಪಿನ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ನಂತರ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪರೀಕ್ಷೆಗೆ ಅಗತ್ಯ ವಸ್ತುಗಳ ಜೊತೆಗೆ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.