ಆಂಧ್ರಪ್ರದೇಶದ ಎಲ್ಲೂರಿನಲ್ಲಿ ಕ್ಷಿಪ್ರವಾಗಿ ಹರಡುತ್ತಿರುವ ನಿಗೂಢ ಕಾಯಿಲೆಗೆ ಒಬ್ಬ ಬಲಿಯಾಗಿದ್ದು, 292 ಮಂದಿ ಅಸ್ವಸ್ಥಗೊಂಡಿದ್ದಾರೆ.
ಪಶ್ಚಿಮ ಗೋದಾವರಿ ಆಸ್ಪತ್ರೆಗೆ ಅಸ್ವಸ್ಥಗೊಂಡವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನಂತರ 140 ಮಂದಿ ಗುಣಮುಖಿತರಾಗಿ ಮನೆಗೆ ಹಿಂತಿರುಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶೀತ-ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬನನ್ನು ವಿಜಯವಾಡದ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಜೆ ಮೃತಪಟ್ಟಿದ್ದಾರೆ. 7 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.