ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 108 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 33 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಪಾಸಿಟಿವ್ ಮಾಹಿತಿ:
ಪಾಸಿಟಿವ್ ಆದವರಲ್ಲಿ 104 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 4 ಮಂದಿ ವಿದೇಶಗಳಿಂದ ಆಗಮಿಸಿದವರು.
ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ
ಕಾಸರಗೋಡು ನಗರಸಭೆ 4, ಮಧೂರು ಪಂಚಾಯತ್ 2, ಪುತ್ತಿಗೆ ಪಂಚಾಯತ್ 1, ಮುಳಿಯಾರು ಪಂಚಾಯತ್ 3, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮಂಗಲ್ಪಾಡಿ ಪಂಚಾಯತ್ 2, ಕುತ್ತಿಕೋಲು ಪಂಚಾಯತ್ 18, ಚೆಂಗಳ ಪಂಚಾಯತ್ 1, ಚೆಮ್ನಾಡ್ ಪಂಚಾಯತ್ 2, ಕಾಞಂಗಾಡ್ ನಗರಸಭೆ 14, ಅಜಾನೂರು ಪಂಚಾಯತ್ 1, ಬಳಾಲ್ ಪಂಚಾಯತ್ 4, ಕಳ್ಳಾರ್ ಪಂಚಾಯತ್ 7, ಮಡಿಕೈ ಪಂಚಾಯತ್ 8, ಪಡನ್ನ ಪಂಚಾಯತ್ 1, ಪಳ್ಳಿಕ್ಕರೆ ಪಂಚಾಯತ್ 4, ಪನತ್ತಡಿ ಪಂಚಾಯತ್ 1, ಪಿಲಿಕೋಡ್ ಪಂಚಾಯತ್ 3, ಉದುಮಾ ಪಂಚಾಯತ್ 5, ನೀಲೇಶ್ವರ ನಗರಸಭೆ 8, ಕೋಡೋಂ-ಬೇಳೂರು ಪಂಚಾಯತ್ 4, ಕಿನಾನೂರು-ಕರಿಂದಲಂ ಪಂಚಾಯತ್ 6, ಕಯ್ಯೂರು-ಚೀಮೇನಿ ಪಂಚಾಯತ್ 1, ಈಸ್ಟ್ ಏಳೇರಿ ಪಂಚಾಯತ್ 2, ಕೊಲ್ಲಂ 1, ಕೊಲ್ಲಂ ವೆಳಿಯಂ 1 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.
ನೆಗೆಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ:
ಕಾಸರಗೋಡು ನಗರಸಭೆ 2, ಮುಳಿಯಾರು ಪಂಚಾಯತ್ 4, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮಂಜೇಶ್ವರ ಪಂಚಾಯತ್ 1, ದೇಲಂಪಾಡಿ ಪಂಚಾಯತ್ 3, ಚೆಮ್ನಾಡ್ ಪಂಚಾಯತ್ 3, ಕಾಞಂಗಾಡ್ ನಗರಸಭೆ 3, ಅಜಾನೂರು ಪಂಚಾಯತ್ 3, ಉದುಮಾ ಪಂಚಾಯತ್ 2, ನೀಲೇಶ್ವರ ನಗರಸಭೆ 3, ತ್ರಿಕರಿಪುರ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 3, ಕಿನಾನೂರು-ಕರಿಂದಲಂ ಪಂಚಾಯತ್ 4 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನಿಗಾ:
ಕಾಸರಗೋಡು ಜಿಲ್ಲೆಯಲ್ಲಿ 8020 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 7584 ಮಂದಿ, ಸಾಂಸ್ಥಿಕವಾಗಿ 436 ಮಂದಿ ನಿಗಾದಲ್ಲಿರುವರು. ನೂತನವಾಗಿ 561 ಮಂದಿ ನಿಗಾ ಪ್ರವೇಶಿಸಿದ್ದಾರೆ. 519 ಮಂದಿ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 1288 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 290 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ:
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 22091 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರಲ್ಲಿ 20205 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ವಿದೇಶಗಳಿಂದ 1058 ಮಂದಿ, ಇತರ ರಾಜ್ಯಗಳಿಂದ 828 ಮಂದಿ ಆಗಮಿಸಿದವರು. ಈ ವರೆಗೆ ಒಟ್ಟು 20764 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 234 ಆಗಿದೆ. ಸದ್ರಿ 1093 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ.