HEALTH TIPS

ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕೋರ್ಸ್‌ ನಂತರ 10 ವರ್ಷ ಸರ್ಕಾರಿ ಸೇವೆ ಕಡ್ಡಾಯ

          ಲಖನೌ: ವೈದ್ಯಕೀಯ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ನಂತರ, ವೈದ್ಯರು ಕಡ್ಡಾಯವಾಗಿ 10 ವರ್ಷಗಳ ಕಾಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು. ತಪ್ಪಿದಲ್ಲಿ ಸರ್ಕಾರಕ್ಕೆ ₹ 1 ಕೋಟಿ ಪಾವತಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

         ಸ್ನಾತಕೋತ್ತರ ಕೋರ್ಸ್‌ ಪೂರ್ಣಗೊಂಡ ನಂತರ ಸೇವೆ ಆರಂಭಿಸಿರುವ ವೈದ್ಯರು, ನಂತರ ಉನ್ನತ ಅಧ್ಯಯನ ಮತ್ತು ತರಬೇತಿಗಾಗಿ ನಿರಾಕ್ಷೇಪಣಾ ಪತ್ರ ಪಡೆದು ಸೇವೆಯಲ್ಲಿ ಮುಂದುವರಿಯುತ್ತಿರಲಿಲ್ಲ. ಈ ಪ್ರವೃತ್ತಿಗೆ ಕಡಿವಾಣ ಹಾಕಲು ಉತ್ತರ ಪ್ರದೇಶ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

          'ಇದೇ ಷರತ್ತುಗಳೊಂದಿಗೆ 2017ರ ಏಪ್ರಿಲ್ 3ರಂದು ಆದೇಶವನ್ನು ಹೊರಡಿಸಲಾಗಿತ್ತು. ಇವೇ ಷರತ್ತುಗಳನ್ನು ಪುನಃ ಉಲ್ಲೇಖಿಸಿ ಹೊಸದಾಗಿ ಆದೇಶ ಹೊರಡಿಸಲಾಗಿದೆ' ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್‌ಮೋಹನ್‌ ಪ್ರಸಾದ್‌ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries