HEALTH TIPS

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 24,337 ಸೋಂಕು ಪ್ರಕರಣಗಳು ದಾಖಲು

      ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 24,337 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,00,55,560ಕ್ಕೆ ಏರಿಕೆಯಾಗಿದೆ.

       ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 24,337 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ  1,00,55,560ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 333 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ  ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,45,810ಕ್ಕೆ ಏರಿಕೆಯಾಗಿದೆ.

       ನಿನ್ನೆ ಒಂದೇ ದಿನ 25,709 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 96,06,111 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,03,639 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

      ನಿನ್ನೆ ಒಂದೇ ದಿನ ದೇಶಾದ್ಯಂತ 9,00,134  ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೆ ಈ ವರೆಗೂ 16,20,98,329 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries