ಪತ್ತನಂತಿಟ್ಟು: ವಿಶ್ವ ಪ್ರಸಿದ್ದ ಯಾತ್ರಾಕೇಂದ್ರವಾದ ಶಬರಿಮಲೆಯಲ್ಲಿ ಯಾತ್ರಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ದಿನಕ್ಕೆ ಎರಡು ಸಾವಿರ ಜನರಿಗೆ ಕ್ಷೇತ್ರ ಸಂದರ್ಶನ ನಡೆಸಲು ಅನುಮತಿಸಲಾಗುವುದು. ಜೊತೆಗೆ ಶನಿವಾರ ಮತ್ತು ಭಾನುವಾರ 3,000 ಜನರಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.
ಪ್ರಸ್ತುತ, ಪ್ರತಿದಿನ ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಶಬರಿಮಲೆ ಪರಿಸರ ಪ್ರದೇಶದ ಅರಣ್ಯ ಪ್ರದೇಶದಲ್ಲಿ ವಾಸಿಸುವ ಸ್ಥಳೀಯ ನಿವಾಸಿಗಳಿಗೆ ಅರಣ್ಯ ಮಾರ್ಗದ ಮೂಲಕ ಶಬರಿಮಲೆಗೆ ಭೇಟಿ ನೀಡಲು ಅರಣ್ಯ ಇಲಾಖೆ ಅನುಮತಿ ನೀಡಿದೆ.
ಮಲಯಾರ ಸಮುದಾಯಕ್ಕೆ ಸೇರಿದವರಿಗೆ ಮಾತ್ರ ಅರಣ್ಯ ಮಾರ್ಗವನ್ನು ಬಳಸಲು ಅನುಮತಿ ನೀಡಲಾಗಿದೆ. ಮಲಯಾರ ಸಮುದಾಯದ ವಿಶೇಷ ಕೋರಿಕೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಅರಣ್ಯ ಸಚಿವ ಕೆ.ರಾಜು ಹೇಳಿದರು. ಕೋವಿಡ್ ವ್ಯಾಪಕತೆಯ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೆ ದರ್ಶನಕ್ಕೆ ಕಠಿಣ ನಿರ್ಬಂಧ ಹೇರಲಾಗಿದೆ.