ಜಿನಿವಾ; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 575,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 75,704,857ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ವರೆಗೂ 1,690,061 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಈ ನಡುವೆ ಕೊರೋನಾಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಅಕ್ಷರಶಃ ನಲುಗಿ ಹೋಗಿದ್ದು, ಈ ವರೆಗೂ ಆ ರಾಷ್ಟ್ರದಲ್ಲಿ ಬರೋಬ್ಬರಿ 326,772 ಮಂದಿ ಬಲಿಯಾಗಿದ್ದಾರೆ, ಅಲ್ಲದೆ, 18,473,716ಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆ.
ಹೆಚ್ಚು ಕೊರೋನಾ ಬಾಧಿತ ರಾಷ್ಟ್ರಗಳ 10 ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈ ವರೆಗೂ 10,075,422 ಮಂದಿ ಸೋಂಕಿಗೊಳಗಾಗಿದ್ದು, 146,145 ಮಂದಿ ಸಾವನ್ನಪ್ಪಿದ್ದಾರೆ. 3ನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 7,264,221 ಮಂದಿ ಸೋಂಕಿನಿಂದ ಬಳಲುತ್ತಿದ್ದು, 187,322 ಮಂದಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ.