HEALTH TIPS

ಇಂದು ಮಧ್ಯರಾತ್ರಿಯಿಂದ 24x7x365 RTGS ಸೌಲಭ್ಯ: ಆರ್‌ಬಿಐ

            ನವದೆಹಲಿ: ಡಿಜಿಟಲ್ ವ್ಯವಹಾರಗಳಿಗೆ ಪ್ರೋತ್ಸಾಹ ನೀಡಿ, ಡಿಜಿಟಲ್ ಹಣಕಾಸಿನ ವ್ಯವಹಾರ ಸಲೀಸಾಗಿ ಆಗಲಿ ಎಂಬ ಕಾರಣದಿಂದ ದಿನದ 24‍X7 ಅವಧಿಗೂ RTGS ಸೌಲಭ್ಯವನ್ನು ವಿಸ್ತರಿಸಿ ಘೋಷಣೆ ಮಾಡಲಾಗಿತ್ತು. ಡಿ.1ರಿಂದಲೇ ಜಾರಿಗೆ ಬರಬೇಕಾಗಿತ್ತು. ಆದರೆ, ವಿಳಂಬವಾದರೂ  ಇಂದು ಮಧ್ಯರಾತ್ರಿಯಿಂದ  (ಡಿ.13ರಿಂದ) ಜಾರಿಗೆ ಬರುತ್ತಿದೆ.

          ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಆಗಿ ಎರಡು ವರ್ಷ ಪೂರೈಸಿರುವ ಶಕ್ತಿಕಾಂತ್ ದಾಸ್ ಅವರು ಭಾನುವಾರ(ಡಿ. 13) ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿಸೆಂಬರ್ 13ರ ಮಧ್ಯರಾತ್ರಿ ನಂತರ 12:30ಕ್ಕೆ RTGS ಸೌಲಭ್ಯವನ್ನು ವಿಸ್ತರಣೆ ಜಾರಿಗೊಳ್ಳಲಿದೆ. ಈ ಮೂಲಕ 24x7x365 RTGS ಸೌಲಭ್ಯ ಹೊಂದಿರುವ ಕೆಲವೇ ದೇಶಗಳ ಪೈಕಿ ಭಾರತವೂ ಸೇರ್ಪಡೆಯಾಗಿದೆ ಎಂದು ಹೇಳಿದರು.

          ಬ್ಯಾಂಕ್ ಖಾತೆಗಳಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮೇಲಿದ್ದ ಶುಲ್ಕವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗ್ರಾಹಕರಿಗೆ ಈ ಮೂಲಕ ಮತ್ತೊಂದು ಶುಭ ಸುದ್ದಿ ನೀಡಿದೆ.

            National Electronic funds transfer(NEFT) ಸೌಲಭ್ಯ ಬಳಸಿ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಿಂದ ಮೂಲಕ 2 ಲಕ್ಷ ರೂ.ಗಳ ವರೆಗೆ ಹಾಗೂ real time gross settlement (RTGS) ಮೂಲಕ 2 ಲಕ್ಷಕ್ಕಿಂತ ಅಧಿಕ ಮೊತ್ತವನ್ನು ವರ್ಗಾಯಿಸಬಹುದಾಗಿದೆ. ಇಲ್ಲಿ ತನಕ ಬ್ಯಾಂಕ್ ಕಾರ್ಯ ನಿರ್ವಹಿಸುವ ಸಮಯದಲ್ಲಿ ಮಾತ್ರ RTGS ಬಳಸಬಹುದಾಗಿತ್ತು.

        ಕಳೆದ ಡಿಸೆಂಬರ್ ತಿಂಗಳಿನಿಂದ NEFT ಕೂಡಾ ದಿನದ 24 ಗಂಟೆಗಳ ಕಾಲ ಬಳಕೆಗೆ ಲಭ್ಯವಾಗಿದೆ. ಇದಕ್ಕೂ ಮುನ್ನ NEFT ಬೆಳಗ್ಗೆ 8 ರಿಂದ ರಾತ್ರಿ 7ರ ತನಕ ಮಾತ್ರ ಲಭ್ಯವಿತ್ತು. ಅಲ್ಲದೆ ಎರಡನೇ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಬಳಕೆ ಮಾಡಲು ಸಾಧ್ಯವಾಗುತ್ತಿರಲಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries