ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಯುತ್ತಿದ್ದು, ಭಾರತದಲ್ಲಿ ಮಂಗಳವಾರ 30 ಸಾವಿರಕ್ಕಿಂತ ಕಡಿಮೆ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ 26,567 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 97,03,770ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ 385 ಮಂದಿ ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 1,40,958.ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 39,045 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 91,78,946 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂತಿರುಗಿದ್ದಾರೆ.
ದೇಶದಲ್ಲಿ ಇದೀಗ 3,83,866.ಸಕ್ರಿಯ ಪ್ರಕರಣಗಳಿವೆ. ಕೊರೋನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆಯನ್ನು ಹೆಚ್ಚಿಸಲಾಗುತ್ತಿದೆ.