ಮುಂಬೈ: ರೂಪಾಂತರಿ ಕೊರೋನಾ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ 2021 ಜನವರಿ 31ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಣೆ ಮಾಡಿದೆ.
ಕೋವಿಡ್-19 ವೈರಸ್ ಹರಡುವುದು ಮಹಾರಾಷ್ಟ್ರ ರಾಜ್ಯಕ್ಕೆ ಅಪಾಯಕಾರಿಯಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.ವೈರಸ್ ಹರಡುವುದನ್ನು ತಡೆಯಲು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಂಕ್ರಾಮಿಕ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಲಾಕ್‍ಡೌನ್ ಅನ್ನು ಜನವರಿ 31 ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಕೋವಿಡ್ ಬಗ್ಗೆ ಪ್ರಸ್ತುತ ಇರುವ ಎಲ್ಲಾ ಮಾರ್ಗಸೂಚಿಗಳು ಮುಂದುವರಿಯಲಿವೆ ಎಂದು ಆದೇಶದಲ್ಲಿ ಸರ್ಕಾರ ತಿಳಿಸಿದೆ.ದೇಶದಲ್ಲಿ ಕೊರೋನಾದ ಹೊಸ ರೂಪಾಂತರಿ ತಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಕಳೆದ ತಿಂಗಳುಗಳಿಂದ ಮಹಾರಾಷ್ಟ್ರ ಸರ್ಕಾರ ಕೆಲವು ವಲಯಗಳ ಮೇಲಿನ ನಿಬರ್ಂಧಗಳನ್ನು ಸಡಿಲಗೊಳಿಸಿತ್ತು. ಧಾರ್ಮಿಕ ಸ್ಥಳಗಳಿಗೆ ಜನರು ತೆರಳು ಕೆಲ ತಿಂಗಳ ಹಿಂದಷ್ಟೇ ಅನುಮತಿ ನತೀಡಿತ್ತು. 9-12ನೇ ತರಗತಿ ಮಕ್ಕಳು ಶಾಲೆ-ಕಾಲೇಜುಗಳಿಗೆ ತೆರಳಲು ಅವಕಾಶ ನೀಡಿತ್ತು.