ನವದೆಹಲಿ: ಸಿಬಿಎಸ್‍ಇ ಬೋರ್ಡ್‍ನ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು 2021ರ ಮೇ 4ರಿಂದ ಆರಂಭವಾಗಿಲಿದ್ದು ಜೂನ್ 10ರ ವರೆಗೂ ನಡೆಯಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೆÇೀಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ಗುರುವಾರ ಮಾತನಾಡಿದ ಅವರು, ಜೂನ್ 10ರ ವರೆಗೂ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳ ಫಲಿತಾಂಶ ಜುಲೈ 15ರಂದು ಪ್ರಕಟವಾಗಲಿದೆ. ಶಾಲೆಗಳು ಹತ್ತು ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಯೋಗ, ಪ್ರಾಜೆಕ್ಟ್ ಹಾಗೂ ಇಂಟರ್‍ನಲ್ ಅಸೆಸ್ಮೆಂಟ್‍ಗಳನ್ನು ಮಾರ್ಚ್ 1ರಿಂದ ನಡೆಸಬಹುದಾಗಿದೆ. ಇದಕ್ಕೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಸಿಬಿಎಸ್‍ಇ ಶೀಘ್ರದಲ್ಲಿಯೇ ಹೊರಡಿಸಲಿದೆ ಎಂದು ಹೇಳಿದರು.
ದೇಶದಲ್ಲಿ ಕೊರೊನಾ ವೈರಸ್ ಸ್ಫೋಟವಾದ ಹಿನ್ನೆಲೆಯಲ್ಲಿ, ಶಿಕ್ಷಣ ಸಚಿವಾಲಯ ಈ ಹಿಂದೆ ಸಿಬಿಎಸ್ ಇ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿತ್ತು. ಸಾಮಾನ್ಯವಾಗಿ ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯುತ್ತವೆ ಮತ್ತು ಪ್ರತಿ ವರ್ಷ ಫೆಬ್ರವರಿತಿಂಗಳಲ್ಲಿ ಸಿದ್ಧಾಂತ ಪರೀಕ್ಷೆಗಳು ಆರಂಭವಾಗಿ ಮಾರ್ಚ್ ನಲ್ಲಿ ಮುಕ್ತಾಯವಾಗುತ್ತವೆ.
ಸಿಬಿಎಸ್ ಇ 10 ನೇ ತರಗತಿ ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಆಫ್ ಲೈನ್ ನಲ್ಲಿ ನಡೆಸಲಾಗುತ್ತದೆ. ದೇಶದಲ್ಲಿ ಕೋವಿಡ್-19 ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಪಠ್ಯಕ್ರಮವನ್ನ ಸಹ ಕಡಿಮೆ ಮಾಡಲಾಗಿದೆ. ವೈರಸ್ ಹರಡುವಿಕೆಯನ್ನ ಕಡಿಮೆ ಮಾಡಲು ಮಾರ್ಚ್ ನಿಂದ ಭಾರತದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ.
ಈಗಾಗಲೇ ಕೆಲ ಶಾಲೆಗಳು ಸಿ ಬಿ ಎಸ್ ಇ ಬೋರ್ಡ್ ಪೂರ್ವಭಾವಿ ಸಿದ್ಧತಾ ಪರೀಕ್ಷೆಗಳನ್ನು ಆನ್ ಲೈನ್ ನಲ್ಲಿ ನಡೆಸಿದ್ದು, ಇದರಿಂದ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಸಿದ್ಧತೆ ನಡೆಸಲು ನೆರವಾಗಿತ್ತು.