HEALTH TIPS

ಕಾಂಗ್ರೆಸ್-ಜೆಡಿಎಸ್ ವಿರೋಧದ ನಡುವೆ ಕರ್ನಾಟಕ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ!

          ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ ಕರ್ನಾಟಕ ವಿಧಾನಸಭೆಯಲ್ಲಿ 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದ್ದು ರಾಜ್ಯ ವಿಧಾನಸಭೆ ನಿನ್ನೆ ಅಂಗೀಕಾರ ನೀಡಿದೆ. 

        ಪಶು ಸಂಗೋಪನೆ ಮತ್ತು ವಕ್ಪ್ ಸಚಿವ ಪ್ರಭು ಚೌವ್ಹಾಣ್ ವಿಧೇಯಕ ಮಂಡನೆಗೆ ಆರಂಭಿಸುತಿದ್ದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಸದನ ಸಲಹಾ ಸಮಿತಿಯಲ್ಲಿ ಹೊಸ ವಿಧೆಯಕ ಮಂಡನೆ ಮಾಡಬಾರದು. ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿರುವ ವಿಧೇಯಕ ಗಳನ್ನು ಮಾತ್ರ ಮಂಡಿಸಬೇಕು ಎಂದು ತೀರ್ಮಾನಿಸಲಾಗಿದೆ. ಈಗ ಏಕಾಏಕಿ ಹೊಸ ಬಿಲ್ ಮಂಡಿಸುತ್ತಿದ್ದಾರೆ.ನಾವು ಇದನ್ನು ಒಪ್ಪುವುದಿಲ್ಲ ಎಂದು ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ನಡೆಸಿದರು.

     ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸುನೀಲ್ ಕುಮಾರ್ ಯಾವುದಾದರೂ ಅಗತ್ಯ ಬಿಲ್ ಇದ್ದರೆ ಅದನ್ನು ತರಬಹುದು ಎಂದು ಚರ್ಚೆಯಾಗಿತ್ತು. ಇದು ಅಗತ್ಯ ಬಿಲ್ ಇದೆ. ಅದನ್ನು ನಾವು ಮಂಡಸಿದ್ದೇವೆ.ನಿಮ್ಮ ಮಾತು ಕೇಳಿ ಬಿಲ್ ತರಬೇಕಿಲ್ಲ. ನೀವು ಅದರ ಮೇಲೆ ಚರ್ಚೆ ಮಾಡಿ ಎಂದು ಹೇಳಿದರು.

     ಸ್ಪೀಕರ್ ಕಾಗೇರಿ ಕೂಡ ನಿನ್ನೆ ಮಹತ್ವದ ಬಿಲ್ ಮಂಡನೆ ಮಾಡಬಹುದು ಎಂದು ಚರ್ಚೆಯಾಗಿತ್ತು. ಹೀಗಾಗಿ ಇದನ್ನು ಮಂಡನೆಗೆ ಅವಕಾಶ ಕೊಟ್ಟಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಆರೋಪ ಪ್ರತ್ಯಾರೋಪ ನಡೆಯಿತು ಸಭೆಯಲ್ಲಿ ಗದ್ದಲದ ವಾತಾವರಣ ಏರ್ಪಟ್ಟಿತು. ಗದ್ದಲದ ನಡುವೆಯೇ ಪ್ರಭು ಚೌವ್ಹಾಣ್ ವಿಧೇಯಕ ಮಂಡಿಸಿದರು. ವಿಧೇಯಕ ಮಂಡನೆ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿಯವರೂ ದನ ಕಡಿಯುವ ಕಾಂಗ್ರೆ???ನವರಿಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದರು.

        ಎಚ್.ಕೆ ಪಾಟೀಲ್ ಮಾತನಾಡಿ, ಸಂವಿಧಾನವನ್ನು ನಿಮ್ಮ ಪಕ್ಷದ ಕಚೇರಿಯನ್ನಾಗಿ ಮಾಡಬೇಡಿ ಬಿಲ್ ಮಂಡನೆ ಬಗ್ಗೆ ಯಾವುದೇ ಅವ ಕಾಶ ಇಲ್ಲ ಎಂದು ಚರ್ಚೆಯಾಗಿದೆ ಎಂದು ಹೇಳಿದರು. ಸದನದಲ್ಲಿ ಗದ್ದಲ ಗೊಂದಲದ ನಡುವೆಯೇ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಗಳ ಮತ್ತು ಕೆಲವು ಇತರೆ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಯಿತು. ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ವಿಧೇಯಕವನ್ನು ಮಂಡಿಸಿದರು. ಹಾಗೂ ವಿಧೇಯಕದ ಬಗ್ಗೆ ವಿವರಣೆ ನೀಡಿದರು. ಸದನದಲ್ಲಿ ಯಾವೊಬ್ಬ ಶಾಸಕರೂ ವಿಧೇಯಕದ ಬಗ್ಗೆ ಚೆರ್ಚೆ ನಡೆಸದ ಹಿನ್ನಲೆಯಲ್ಲಿ ಸ್ಪೀಕರ್ ಧ್ವನಿಮತದ ಮೂಲಕ ವಿಧೇಯಕ ಪರ್ಯಾಲೋಚನೆ ಪ್ರಸ್ತಾವನೆ ಮಂಡಿಸಿ ಅನುಮೋದನೆ ನೀಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries