ಕಾಸರಗೋಡು: ಕನ್ನಡ ಹೋರಾಟ ಸಮಿತಿಯ ತುರ್ತು ಸಭೆ ಇಂದು(ಡಿ.8) ಮಧ್ಯಾಹ್ನ 2 ಗಂಟೆಗೆ ಬ್ಯಾಂಕ್ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ನಡೆಯಲಿದೆ.
ಸಭೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2020-21 ರಲ್ಲಿ ನಡೆಸಿದ ವೈದ್ಯಕೀಯ/ತಾಂತ್ರಿಕ ಪರೀಕ್ಷೆಗಳಲ್ಲಿ ಕಾಸರಗೋಡು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಮೀಸಲಿಟ್ಟ ಸೀಟುಗಳನ್ನು ಕೆಲವು ಮಲಯಾಳಿ ವಿದ್ಯಾರ್ಥಿಗಳು ವಾಮಮಾರ್ಗದಲ್ಲಿ ಕನ್ನ ಹಾಕಿದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಇದರ ವಿರುದ್ಧ ಹೋರಾಟ ನಡೆಸುವ ಬಗ್ಗೆ ತೀರ್ಮಾನ ತೆಗೆದು ಕೊಳ್ಳಲಾಗುವುದೆಂದು ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕಾಸರಗೋಡು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸುವಂತೆ ವಿನಂತಿಸಿದ್ದಾರೆ.